ಸುಂಟಿಕೊಪ್ಪ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಂಗಡಿಗೆ ಅಪ್ಪಳಿಸಿರುವ ಘಟನೆ ಭಾನುವಾರ ಮುಂಜಾನೆ 4 ಗಂಟೆಗೆ ನಡೆದಿದೆ.
ಕುಶಾಲನಗರ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ವೇಳೆ ಅಪಘಾತ ಸಂಭವಿಸಿದೆ. ಕೊಡಗರಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಈ ಅಂಗಡಿಯ ಕಟ್ಟಡವು ಕಾರು ಅಪ್ಪಳಿಸಿದ ರಭಸಕ್ಕೆ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.