ಚಿಕ್ಕಮಗಳೂರು: ಅಂಗನವಾಡಿ ಕೇಂದ್ರಗಳನ್ನು ಸ್ವಚ್ಚವಾಗಿಟ್ಟು ನಿರ್ವಹಣೆ ಮಾಡಬೇಕು ಹಾಗೂ ಸರ್ಕಾರಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ತಿಳಿಸಿದರು.
ನಗರದ ತಾಲೂಕು ಸ್ತಿçÃಶಕ್ತಿ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಸಬಾ-೧, ಕಸಬಾ-೨, ಹಿರೇಮಗಳೂರು ಮತ್ತು ಕೆ.ಆರ್ ಪೇಟೆ ವೃತ್ತಗಳ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರ ವಿಶೇಷ ಸಭೆಯನ್ನುz್ದೆÃಶಿಸಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳನ್ನು ಸಮಯಕ್ಕೆ ಸರಿಯಾಗಿ ತೆರೆದು ಯಾವುದೇ ಫಲಾನುಭವಿಗಳನ್ನು ನಿರ್ಲಕ್ಷಿಸದೆ ಸುಕನ್ಯಾ ಸಮೃದ್ಧಿ, ಪ್ರಧಾನಮಂತ್ರಿ ಮಾತೃವಂದನಾ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಒದಗಿಸಬೇಕು ಎಂದು ಹೇಳಿದರು.
ಪೂರಕ ಪೌಷ್ಠಿಕ ಆಹಾರವನ್ನು ನಿಯಮಿತವಾಗಿ ಫಲಾನುಭವಿಗಳಿಗೆ ತಲುಪಿಸಲು ಕ್ರಮವಹಿಸಬೇಕು. ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬಾಂಡ್ ಪರಿಪಕ್ವತೆ ಹೊಂದಿರುವುದರಿAದ ತಕ್ಷಣವೆ ವರದಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಲಕ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅಂಗನವಾಡಿ ಕೇಂದ್ರಗಳನ್ನು ತಮ್ಮ ಮನೆಗಳಂತೆಯೆ ಭಾವಿಸಿ ಕೇಂದ್ರಗಳ ಸ್ವಚ್ಚತೆ ಕಾಪಾಡಿ ಕಡ್ಡಾಯವಾಗಿ ಇರಬೇಕಾದ ಶೌಚಗೃಹ, ವಿದ್ಯುತ್, ಫ್ಯಾನ್, ಕಟ್ಟಡ ಹಾಗೂ ಮೂಲಭೂತ ಸೌಕರ್ಯಗಳು ಸುಸ್ಥಿತಿಯಲ್ಲಿ ಇರುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಅಂಗನವಾಡಿ ಕೇಂದ್ರಗಳ ನಿಯಮಿತ ಕಾರ್ಯಗಳಲ್ಲಿ ಸರಿಯಾಗಿ ನಿರ್ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಇಲಾಖೆಯಿಂದ ಸಮಯಕ್ಕೆ ಸರಿಯಾಗಿ ಗೌರವಧನವನ್ನು ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತಿದ್ದು ಉತ್ತಮ ರೀತಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಲೋಕೇಶ್ವರಪ್ಪ, ಸಿಡಿಪಿಒ ರಂಗನಾಥ್, ಎಸಿಡಿಪಿಒ ಹಾಗೂ ಮೇಲ್ವಿಚಾರಕಿಯರು ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.