ಚಿಕ್ಕಮಗಳೂರು: ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉz್ದೆÃಶದೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತç ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮವಸ್ತç ವಿತರಿಸಿ ಮಾತನಾಡಿದರು.
ಈ ಯೋಜನೆಯಡಿ ಚಿಕ್ಕಮಗಳೂರು ತಾಲೂಕಿನಲ್ಲಿ ೪೦ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದ್ದು, ಈ ಅಂಗನವಾಡಿ ಕೇಂದ್ರಗಳಿಗೆ ಟಿವಿ, ಪೆನ್‌ಡ್ರೆÊವ್, ಸ್ಟೆಬಿಲೈಜರ್ ವಿತರಣೆ ಮಾಡಲಾಗುತ್ತಿದ್ದು, ಅಂಗನವಾಡಿ ಕೇಂದ್ರಕ್ಕೆ ಆಗಮಿಸುವ ೩ರಿಂದ ೬ ವರ್ಷದ ಮಕ್ಕಳಿಗೆ ಹಾಗೂ ಇತರೆ ಫಲಾನುಭವಿಗಳಿಗೆ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.
ಪ್ರತಿ ವರ್ಷದಂತೆ ತಾಲೂಕಿನ ೪೦೭ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತç ವಿತರಣೆ ಮಾಡಲಾಗುತ್ತಿದೆ. ಜೊತೆಗೆ ಇತರ ಪರಿಕರಗಳನ್ನು ನೀಡಲಾಗುವುದು. ಇಲಾಖೆ ವತಿಯಿಂದ ಉತ್ತಮ ಗುಣಮಟ್ಟದ ಎರಡು ಸಮವಸ್ತçದ ಸೀರೆಗಳನ್ನು ವಿತರಿಸಲಾಗುವುದು ಎಂದರು.
ಅ. ೨ ಕ್ಕೆ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಿ ೫೦ ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ತಾಲೂಕಿನ ೪೭ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದು ಹೇಳಿದರು.
ಈ ಸಂಬAಧ ಈಗಾಗಲೇ ಪಠ್ಯಪುಸ್ತಕಗಳು ಸರಬರಾಜಾಗುತ್ತಿದ್ದು, ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ತರಗತಿಗಳನ್ನು ನಡೆಸಲಾಗುವುದು. ೪ರಿಂದ ೫ ವರ್ಷದ ಮಕ್ಕಳಿಗೆ ಎಲ್‌ಕೆಜಿ, ೫ರಿಂದ ೬ ವರ್ಷದ ಮಕ್ಕಳಿಗೆ ಯುಕೆಜಿ ತರಗತಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮಡಿಷನ್ ಕಿಟ್ ಸರಬರಾಜು ಮಾಡಲಾಗಿದ್ದು, ಅಂಗನವಾಡಿ ಫಲಾನುಭವಿಗಳಿಗೆ ಈ ಕಿಟ್ಟನ್ನು ಪ್ರಥಮ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದರು.
ಮೊದಲಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಸ್ವಾಗತಿಸಿ ಮಾತನಾಡಿ, ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಹಂತ ಹಂತವಾಗಿ ಆಂಗ್ಲ ಮಾಧ್ಯಮದಲ್ಲಿ ಎಲ್‌ಕೆಜಿ, ಯುಕೆಜಿ ವಿನೂತನ ತರಗತಿಗಳನ್ನು ೨೦೨೫ರ ಅ . ೨ ರಂದು ವಿದ್ಯುಕ್ತವಾಗಿ ಸರ್ಕಾರದ ಆದೇಶದಂತೆ ಆರಂಭಿಸಲಾಗುವುದು. ಖಾಸಗಿ ಶಾಲೆಗಳ ಶಿಕ್ಷಣಕ್ಕೆ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸಲು ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯ್‌ಕುಮಾರ್, ಎಸಿಡಿಪಿಓ ರೂಪಾ ಕುಮಾರಿ, ವಸಂತ ಕುಮಾರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.