ಪಿರಿಯಾಪಟ್ಟಣ: ಅಂಗವಿಕಲತೆ ಶಾಪವಲ್ಲ. ಕಡೆಗಣಿಸದೆ ಪಾಲಕರು ವಿಕಲಾಂಗ ಮಕ್ಕಳ ಏಳಿಗೆಗೆ ಶ್ರಮಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಿ.ಆರ್.ಕೃಷ್ಣಕುಮಾರ್ ಸಲಹೆ ನೀಡಿದರು.
ಪಟ್ಟಣದ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ಅಲಿಂಕೋ ಸಂಸ್ಥೆ, ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ 1 ರಿಂದ 12 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ಮಕ್ಕಳ ವೈದ್ಯಕೀಯ ತಪಾಸಣೆ ಹಾಗೂ ಮೌಲ್ಯಾಂಕನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದರು.
ಶೇ.5ರ ಅನುದಾನದಲ್ಲಿ ಈ ಮಕ್ಕಳಿಗೆ ಸಾಧನ ಸಲಕರಣೆ ಒದಗಿಸಲು ಕ್ರಮವಹಿಸಲಾಗುವುದು. ಈಗಾಗಲೇ 3 ಲಕ್ಷ ರೂ.ವೆಚ್ಚದಲ್ಲಿ ಸಾಧನ ಸಲಕರಣೆಗಳನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ಬಿಆರ್‌ಸಿ ಬಿ.ಎಚ್.ಶಿವರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಉದಯ್ ಕುಮಾರ್, ರಾಜಶೇಖರ ಹಾಗೂ ಸಾರ್ವಜನಿಕ ಅಸ್ಪತ್ರೆ ವೈದ್ಯರಾದ ಡಾ.ಸಚ್ಚಿದಾನಂದ, ಡಾ.ಚಂದ್ರವತಿ, ಡಾ.ಪ್ರಮೋದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಮಶಿವಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಕೆ.ಶಿವಮೂರ್ತಿ, ಬಿಐಇಆರ್‌ಟಿಗಳಾದ ಎಸ್.ಬಿ.ಪುಟ್ಟರಾಜು, ಕೆ.ಆರ್.ಭಾಸ್ಕರ್, ಎಸ್.ರಾಮಯ್ಯ, ಲಕ್ಷ್ಮೀ ಮತ್ತಿತರರು ಹಾಜರಿದ್ದರು.