ಜಿಲ್ಲೆ

ಅಂಗವಿಕಲರ ಮಾಸಾಶನ ಹೆಚ್ಚಿಸಲು ಪ್ರಯತ್ನ

ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚಿನ ವಿಕಲಚೇತನ ಕ್ರೀಡಾಪಟುಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಶಾಸಕ ರಾಜು ಸೇಠ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೋಟಿವೇಶನ್ ಇಂಡಿಯಾ, ಓಲ್ಕಾರ್ಟ್ ಫೌಂಡೇಶನ್ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಅಂಗವಿಕಲರ ಕ್ರೀಡಾ ಸಂಘದ ವತಿಯಿಂದ ಮಂಗಳವಾರ ನಡೆದ ಅಂಗವಿಕಲರ ಗಾಲಿ ಕುರ್ಚಿ ಬಾಸ್ಕೆಟ್‌ಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಅಂಗವಿಕಲ ಕ್ರೀಡಾಪಟುಗಳಿಗೆ ಸರ್ಕಾರದ ವತಿಯಿಂದ ಪ್ರಯಾಣ ವೆಚ್ಚ ಹಾಗೂ ಜಿಲ್ಲಾ ವಿಕಲಚೇತನರ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಮತ್ತು ಅಂಗವಿಕಲರ ಮಾಸಾಶನವನ್ನು 5,000 ರೂ. ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿನಂತಿಸುತ್ತೇನೆ ಎಂದು ತಿಳಿಸಿದರು.

ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಮಾತನಾಡಿದರು. ಸುರೇಶ ಯಾದವ ಫೌಂಡೇಶನ್ ಅಧ್ಯಕ್ಷ ಸುರೇಶ ಯಾದವ, ವಿ.ಎಸ್.ಪಾಟೀಲ್, ಜಿಲ್ಲಾ ಅಂಗವಿಕಲರ ಕ್ರೀಡಾ ಸಂಘದ ಅಧ್ಯಕ್ಷ ಮಹಾಂತೇಶ ಹೊಂಗಲ, ಸೂರಜ್ ದಾಮಣೇಕರ ಇತರರಿದ್ದರು.