ಚಾಮರಾಜನಗರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26 ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಜಿಲ್ಲೆಯ ಅಂಗವಿಕಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಉನ್ನತ ಶಿಕ್ಷಣ ಪಡೆಯುವ ಅಂಗವಿಕಲ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ ಹಾಗೂ ವಿಕಲಚೇತನರನ್ನು ವಿವಾಹವಾಗುವ ಸಾಮಾನ್ಯ ಯುವಕ, ಯುವತಿಯರಿಗೆ ವಿವಾಹ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿಯನ್ನು ಆಯಾ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಪಡೆದು ಅ.10 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ.ಗಳನ್ನು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂ ಹಾಗೂ ವಿ.ಆರ್.ಡಬ್ಲ್ಯೂ.ಗಳನ್ನು ಸಂಪರ್ಕಿಬಹುದು. ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ವಿಕಲಚೇತನರ ಸಹಾಯವಾಣಿ ದೂ.ಸಂ 08226-223688, 224688 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.