ಜಿಲ್ಲೆ

ಅಂಗವಿಕಲರಿಗೆ ಉಚಿತ ಸಲಕರಣೆ ವಿತರಣೆ

ಚಿತ್ರದುರ್ಗ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಅಡಿಪ್ ಯೋಜನೆಯಡಿ ಅಂಗವಿಕಲರಿಗೆ ಸಲಕರಣೆಗಳನ್ನು ಉಚಿತವಾಗಿ ಒದಗಿಸಲು ಜಿಲ್ಲೆಯ ಆರು ತಾಲೂಕುಗಳಲ್ಲಿ ಜೂ.26ರಿಂದ ವೈದ್ಯಕೀಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆರೋಗ್ಯಇಲಾಖೆ ಹಾಗೂ ಬೆಂಗಳೂರಿನ ಆಕ್ಸಿಲರಿ ಪ್ರೊಡಕ್ಷನ್ ಸೆಂಟರ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಶಿಬಿರಕ್ಕೆ ಹಾಜರಾಗಿ ಸೌಲಭ್ಯ ಪಡೆದುಕೊಳ್ಳಬಹುದು.
26ರಂದು ಚಳ್ಳಕೆರೆ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ, 27ರಂದು ಮೊಳಕಾಲ್ಮೂರಿನ ಕ್ಷೇತ್ರ ಮಾದರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ(ಹೈಟೆಕ್), 28 ರಂದು ಹಿರಿಯೂರು ಬಿಆರ್‌ಸಿ ಕೇಂದ್ರ, ಜುಲೈ 1ರಂದು ಹೊಳಲ್ಕೆರೆ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆ, 2 ರಂದು ಹೊಸದುರ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, 3ರಂದು ಚಿತ್ರದುರ್ಗದ ಕೋಟೆ ಪ್ರೌಢಶಾಲೆಯಲ್ಲಿ ಶಿಬಿರ ಏರ್ಪಡಿಸಲಾಗಿದೆ.
ಬೆಳಗ್ಗೆ 10 ಗಂಟೆಯಿಂದ ವೈದ್ಯಕೀಯ ತಪಾಸಣೆ ನಡೆಯಲಿದೆ. ಅರ್ಹರು ಅಗತ್ಯ ದಾಖಲೆಗಳೊಂದಿಗೆ ಶಿಬಿರಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಚಿತ್ರದುರ್ಗದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ(08194-235284) ಸಂಪರ್ಕಿಸಬಹುದು ಎಂದು ಪ್ರಭಾರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ.