ಜಿಲ್ಲೆ

ಅಂತರ ವಲಯ ಪುರುಷರ ಕ್ರೀಡಾಕೂಟಕ್ಕೆ ಚಾಲನೆ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಸ್ಪೋರ್ಟ್ಸ್ ಪೆವಿಲಿಯನ್‌ನಲ್ಲಿ ಆಯೋಜಿಸಿರುವ ಅಂತರ ಕಾಲೇಜು, ಅಂತರ ವಲಯ ಪುರುಷರ ಕ್ರೀಡಾಕೂಟಕ್ಕೆ ಕುಲಸಚಿವೆ ವಿ.ಆರ್.ಶೈಲಜಾ ಬುಧವಾರ ಚಾಲನೆ ನೀಡಿದರು.
ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಎಲ್ಲರೂ ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಳ್ಳುವಂತೆ ಅವರು ಸಲಹೆ ನೀಡಿದರು.
ಏಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟ್ರೀಯ ವಾಲಿಬಾಲ್ ಆಟಗಾರ ಟಿ.ವಿ.ರವೀಂದ್ರ, ಮೈಸೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸಿ.ವೆಂಕಟೇಶ್, ಉಪ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಇದ್ದರು.
ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳ 40 ಕಾಲೇಜುಗಳ 900 ಕ್ರೀಡಾಪಟುಗಳು ಮೂರು ದಿನಗಳ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ವಿವಿಧ 15 ಆಟೋಟಗಳು ನಡೆಯಲಿವೆ.