ಜಿಲ್ಲೆ

ಅಂಧರು ನೇತ್ರ ತಪಾಸಣಾ ಶಿಬಿರದ ಪ್ರಯೋಜನ ಪಡೆಯಿರಿ

ಬನ್ನೂರು: ಅಂಧತ್ವದಲ್ಲಿ ಜೀವನ ಸಾಗಿಸುತ್ತಿರುವವರು ನೇತ್ರ ತಪಾಸಣಾ ಉಚಿತ ಶಿಬಿರದ ಪ್ರಯೋಜನ ಪಡೆದು ಉತ್ತಮ ಜೀವನ ನಡೆಸಿ ಎಂದು ರೋಟರಿ ಮಾಜಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್‌ಕಾಳಪ್ಪ ಸಲಹೆ ನೀಡಿದರು.

ಪಟ್ಟಣದ ರೋಟರಿ ಸಂಸ್ಥೆ, ಕಾನ್‌ಸಿಂಗ್‌ಜೀ ರಾಜ್‌ಪುರೋಹಿತ್, ಶ್ರೀಗೌರಿದೇವಿ, ಲಯನ್ಸ್ ಕ್ಲಬ್ ಆಫ್ ಈರೋಡ್ ಕಾವೇರಿ ಟ್ರಸ್ಟ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ನೇತ್ರ ತಪಾಸಣಾ ಉಚಿತ ಶಿಬಿರದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ದೃಷ್ಟಿಹೀನರು, ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ದೃಷ್ಟಿಹೀನರ ಸಂಖ್ಯೆ ಅಧಿಕವಾಗಿದ್ದು, ಅವರಿಗೆ ಅನುಕೂಲವಾಗಬೇಕು ಎನ್ನುವಂತ ಮಹತ್ವಾಕಾಂಕ್ಷೆಯಿಂದ ಈ ಸೇವಾ ಕಾರ್ಯವನ್ನು ಮಾಡುತ್ತಾ ಬರುತ್ತಿದೆ ಎಂದರು.

ಕಣ್ಣಿನ ಪೊರೆ ಸಮಸ್ಯೆ ಇರುವವರನ್ನು ಆಯ್ಕೆ ಮಾಡಿ ಕೊಯಮತ್ತೂರು ಕಣ್ಣಿನ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ, ಶಸ್ತ್ರ ಚಿಕಿತ್ಸೆ ಮಾಡಿಸಿ ಪುನಃ ಸ್ವಸ್ಥಳಕ್ಕೆ ತಂದು ಬಿಡಲಾಗುವುದು ಎಂದು ತಿಳಿಸಿದರು.

ಹಲವು ಗ್ರಾಮಗಳಿಂದ ಸುಮಾರು 190ಕ್ಕೂ ಹೆಚ್ಚು ಶಿಬಿರಾರ್ಥಿಗಳು ಆಗಮಿಸಿ ಕಣ್ಣಿನ ತಪಾಸಣೆಗೆ ಮಾಡಿಸಿಕೊಂಡರು. ಕೆ.ರಾಜೇಶ್‌ಕುಮಾರ್, ಡಾ.ವಿಜಯ್‌ಕುಮಾರ್, ಡಾ.ಅಜಯ್‌ವೆಂಕಟ್, ಡಾ.ವಾಲೈಪಾರೀಕ್, ಸಂತೋಷ್‌ಕುಮಾರಿ, ವನ್ಯಾ, ವಿರಾಟ್, ಯಾಸೀನ್ ಮತ್ತಿತರರು ಹಾಜರಿದ್ದರು.