ಜಿಲ್ಲೆ

ಅಂಬರ್ಗೀಸ್ ಮಾರಲು ಯತ್ನಿಸಿದ ಇಬ್ಬರ ಬಂಧನ

ಮೈಸೂರು: ಲಕ್ಷಾಂತರ ರೂ. ಮೌಲ್ಯದ ತಿಮಿಂಗಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಕೇರಳ ಮೂಲದ ಇಬ್ಬರನ್ನು ಜಿಲ್ಲಾ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೇರಳದ ಸಂದೀಪ್‌ಕುಮಾರ್(37) ಹಾಗೂ ಗಿರೀಶ್‌ಕುಮಾರ್(35)ಬಂಧಿತರು.

ಸೆನ್ ಅಪರಾಧ ಠಾಣೆಯ ಉಪಾಧೀಕ್ಷಕ ರಘು ಅವರು ತಮ್ಮ ಸಿಬ್ಬಂದಿಯೊಂದಿಗೆ ಗಸ್ತಿನಲ್ಲಿದ್ದ ವೇಳೆ ಮೈಸೂರು ತಾಲೂಕಿನ ಗೆಜ್ಜಗಳ್ಳಿ ಗ್ರಾಮದ ಮುಖ್ಯ ರಸ್ತೆ ಬಳಿ ಆರೋಪಿಗಳು ಅನುಮಾನಸ್ಪದವಾಗಿ ವರ್ತಿಸುತ್ತಿದ್ದರು.

ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಮೀನುಗಾರರು ನೀಡಿದ ತಿಮಿಂಗಿಲ ವಾಂತಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಇಲ್ಲಿಗೆ ತಂದಿರುವುದಾಗಿ ಒಪ್ಪಿಕೊಂಡಿದ್ದಾರೆ.

ಅವರನ್ನು ಬಂಧಿಸಿ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.