ಯಳಂದೂರು: ತಾಲೂಕಿನ ಅಂಬಳೆ ಗ್ರಾಮದ ಸುತ್ತಮುತ್ತ ಕಳೆದೆರಡು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಗ್ರಾಮದಲ್ಲಿರುವ ಕೆರೆ ಆಸುಪಾಸಿನಲ್ಲಿ ಜಿಂಕೆಗಳಿವೆ. ಇದನ್ನು ಬೇಟೆಯಾಡಲು ಚಿರತೆ ಬಂದಿರಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಚಿರತೆ ಸೆರೆ ಹಿಡಿಯಲು ಬೋನು ಸಹ ಇರಿಸಲಾಗಿದೆ.
ಕಳೆದ ವಾರವಷ್ಟೇ ತಾಲೂಕಿನ ಕೆಸ್ತೂರು, ಮಲ್ಲಿಗೆಹಳ್ಳಿ, ಕಟ್ನವಾಡಿ, ಕಿನಕಹಳ್ಳಿಗಳಲ್ಲಿ ಕಾಣಿಸಿಕೊಂಡು ಭೀತಿ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದರು. ಈ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ಚಿರತೆ ಅಂಬಳೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿರುವುದು ಇಲ್ಲಿನ ನಾಗರಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.