ಜಿಲ್ಲೆ

ಅಕ್ರಮ ಮರಳು ವಶಕ್ಕೆ

ಮುಂಡರಗಿ: ತಾಲೂಕಿನ ಶೀರನಹಳ್ಳಿ ಗ್ರಾಮದ ತುಂಗಭದ್ರಾ ನದಿ ಭಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆಯ ಮೇಲೆ ಸಿಪಿಐ ಸುಧೀರಕುಮಾರ ಬೆಂಕಿ ನೇತೃತ್ವದ ತಂಡ ಬುಧವಾರ ದಾಳಿ ನಡೆಸಿ ಅಂದಾಜು 1 ಲಕ್ಷ ರೂ. ಮೌಲ್ಯದ 5 ಟಿಪ್ಪರ್​ನಷ್ಟು ಮರಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ಉಮೇಶ ಲಮಾಣಿ, ಮಹೇಶ ಗೊಳಗೊಳಕಿ, ನೀಲಕಂಠ ಬಿಂಗಿ ಇದ್ದರು.