ಜಿಲ್ಲೆ

ಅಕ್ರಮ ಮರಳು ಸಾಗಾಟ, ಎರಡು ಟ್ರ್ಯಾಕ್ಟರ್ ವಶ‌

ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಕ್ರಾಸ್ ರಸ್ತೆಯ ಕೊಂಚಿಗೇರಿ ಕ್ರಾಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟ್ರ್ಯಾಕ್ಟರ್ ಸೋಮವಾರ ವಶಪಡಿಸಿಕೊಂಡಿದ್ದಾರೆ.
ಎಸ್ಪಿ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ, ಸಿರಿಗೇರಿ ಠಾಣೆ ಪಿಎಸ್ಐ ಹಾಗೂ ಸಿಬ್ಬಂದಿ
ಸಿರಿಗೇರಿ ಕ್ರಾಸ್ ರಸ್ತೆಯ ಕೊಂಚಿಗೇರಿ ಕ್ರಾಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟ್ರ್ಯಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.