ಬಳ್ಳಾರಿ : ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿ ಗ್ರಾಮದ ಬಳಿಯ ತುಂಗಭದ್ರಾ ನದಿ ದಂಡೆಯಲ್ಲಿ ಅನಧಿಕೃತವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ 2 ಜೆಸಿಬಿ, 4 ಟ್ರ್ಯಾಕ್ಟರ್ ಗಳನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ತುಂಗಭದ್ರಾ ನದಿ ದಂಡೆಯಲ್ಲಿ ಅನಧಿಕೃತವಾಗಿ ಮರಳನ್ನು ಜೆಸಿಬಿ ಯಂತ್ರಗಳ ಮೂಲಕ ಟ್ರ್ಯಾಕ್ಟರ್ ಗಳಿಗೆ ಲೋಡ್ ಮಾಡುವಾಗ ದಾಳಿ ಮಾಡಿ 2 ಜೆಸಿಬಿ, 4 ಟ್ರ್ಯಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಹಚ್ಚೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.