ಜಿಲ್ಲೆ

ಅಕ್ರಮ ಸಾಗಾಟ ಕಂಡರೆ ಕೇಸ್ ದಾಖಲಿಸಿ

ಯಾದಗಿರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಕಂಡು ಬಂದರೆ ಅಥವಾ ದೂರುಗಳು ಬಂದರೆ ತಕ್ಷಣ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ಮಟ್ಟದ ಮರಳು ಮಾನಿಟರಿಂಗ್ ಸಮಿತಿ ಸಭೆಯಲ್ಲಿ ಮಾತನಾಡಿ, ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟುಕೊಂಡರೆ ಆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಅದಕ್ಕೆ ಅಲ್ಲಿನ ಸಂಬಂಧಿಸಿದ ಅಧಿಕಾರಿಗಳೇ ನೇರ ಜವಾಬ್ದಾರಿಯಾಗುತ್ತಾರೆ. ಆದ್ದರಿಂದ ತಹಸೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳು ಜವಾಭ್ದಾರಿಯಿಂದ ಕೆಲಸ ಮಾಡಬೇಕು ಎಂದರು.

ಇನ್ನೂ ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟ ನಿಯಂತ್ರಣಕ್ಕೆ ಮುಂದಾಗಬೇಕು. ತಾಲೂಕು ಹಂತದಲ್ಲಿ ಸಮಿತಿ ರಚಸಿ, ಜಿಲ್ಲೆಯ ಎಲ್ಲ ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು. ಪರವಾನಿಗೆ, ರಾಯಲ್ಟಿ ಸೇರಿ ಇನ್ನಿತರ ದಾಖಲೆಗಳನ್ನು ತಪಾಸಣೆ ಮಾಡಬೇಕು. ಅತೀ ಭಾರದೊಂದಿಗೆ ಸಾಗುವ ವಾಹನಗಳಿಗೆ ದಂಡ ಹಾಕುವುದಲ್ಲದೇ ಎಫ್ಐಆರ್ ದಾಖಲಿಸಬೇಕು. ತಾಲೂಕು ಹಂತದಲ್ಲಿ ಪ್ರತಿ 15 ದಿನಕ್ಕೊಮ್ಮೆ ಮರಳು ಮಾನಿಟರಿಂಗ್ ಸಭೆ ನಡೆಸಬೇಕು. ಸಹಾಯಕ ಆಯುಕ್ತರ ಸಮಿತಿ ಅಕ್ರಮ ಗಣಿಗಾರಿಕೆ ನಿಯಂತ್ರಣಕ್ಕೆ ನಿಗಾ ವಹಿಸಬೇಕು ಎಂದು ನಿದರ್ೇಶನ ನೀಡಿದರು.

ಅಕ್ರಮ ಸಾಗಾಟದಲ್ಲಿ ಭಾಗಿಯಾಗುವ ವಾಹನಗಳನ್ನು ಆರ್ಟಿಓ ಮತ್ತು ಸಂಬಂಧಿಸಿದ ಅಧಿಕಾರಿಗಳು ಜಪ್ತಿ ಮಾಡಿಕೊಳ್ಳಬೇಕು. ರಾಯಲ್ಟಿಕ್ಕಿಂತ ಹೆಚ್ಚಿನ ಟ್ರಿಪ್ ಸಾಗಾಣಿಕೆಯಾಗದಂತೆ ನಿಗಾ ವಹಿಸಬೇಕು. ಜಿಪಿಎಸ್ ಅಳವಡಿಸಿಕೊಂಡಿರುವ ಲಾರಿಗಳಿಗೆ ಮಾತ್ರ ಮರಳು ಸಾಗಣೆಗೆ ಪಮರ್ೀಟ್ ಕೊಟ್ಟು, ಅಕ್ರಮವಾಗಿ ಸಾಗಣೆ ಮಾಡಿ ನಿಯಮ ಉಲ್ಲಂಘಿಸುವ ಲಾರಿಗಳನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳಿ ಎಂದರು.