ಚಾಮರಾಜನಗರ : ತಮಿಳುನಾಡಿನ ಕಸಾಯಿಖಾನೆಗೆ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಬುಧವಾರ ಮಲೆಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿದ್ದಾರೆ.
ಮ.ಬೆಟ್ಟ ಸಮೀಪದ ಕೀರನಹೊಲ ಗ್ರಾಮದ ಪುಟ್ಟಸ್ವಾಮಿ ಹಾಗೂ ಶಂಕಣ್ಣ ಬಂಧಿತರು. ಮಾರಿಹೊಲ ಗ್ರಾಮದ ವೀರಣ್ಣ ಪರಾರಿಯಾಗಿದ್ದಾನೆ.
ಈ ಮೂವರು ರೈತರಿಂದ ಜಾನುವಾರುಗಳನ್ನು ಖರೀದಿಸಿ ತಮಿಳುನಾಡಿನ ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಕಾವೇರಿ ವನ್ಯಜೀವಿ ಅರಣ್ಯ ಪ್ರದೇಶದ ಕಾಲು ದಾರಿಯಲ್ಲಿ ಸಾಗಿಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಬಸವರಾಜು ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿತು.
ಈ ವೇಳೆ ಸಿಕ್ಕಿಬಿದ್ದ ಇಬ್ಬರನ್ನು ವಿಚಾರಣೆಗೊಳಿಸಿ ವಶಕ್ಕೆ ಪಡೆಯಲಾಗಿದ್ದು, ಜಾನುವಾರುಗಳನ್ನು ಕುರುಬೂರು ಪಶುಪಾಲನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಸಿಬ್ಬಂದಿ ಗೋವಿಂದರಾಜು, ಅಸ್ಲಮ್ ಪಾಷ, ಬಸವರಾಜೇಂದ್ರ, ಜಯರಾಮ್, ವಿಶ್ವನಾಥ್ ಇದ್ದರು.