ಜಿಲ್ಲೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ

ಅಕ್ರಮವಾಗಿ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಶ್ರಿರಾಮ ಸೇನೆ ಕಾಯಕರ್ತರು ವಾಹನ ತಡೆದು ವಾಹನದಲ್ಲಿದ್ದ 10 ಜಾನುವಾರುಗಳನ್ನು ರಕ್ಷಿಸಿ, ವಾಹನ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ಶುಕ್ರವಾರ ನಡೆದಿದೆ.

ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ನೇತೃತ್ವದಲ್ಲಿ ಸಂಕೇಶ್ವರದಿಂದ ಹುಬ್ಬಳ್ಳಿಗೆ ಹೊರಟಿದ್ದ ವಾಹನವನ್ನು ಹತ್ತಿರಗಿ ಟೋಲ್ ಬಳಿ ತಡೆದು ಪರೀಕ್ಷಿಸಿದಾಗ, ಅಕ್ರಮ ಪತ್ತೆಯಾಗಿದೆ. ವಾಹನದಲ್ಲಿದ್ದ ಆಕಳು ಮತ್ತು ಎತ್ತು ಸೇರಿ ಹತ್ತು ಜಾನುವಾರಗಳನ್ನು ರಕ್ಷಿಸಿ ರೈತರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ವಾಹನ ಮಾಲೀಕ ಹಾಗು ಚಾಲಕನ ಮೇಲೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.