ಚಾಮರಾಜನಗರ: ತಾಲೂಕಿನ ಕರಡಿಮೋಳೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ಕಳಶದೊಂದಿಗೆ ಮಕ್ಕಳನ್ನು ಶಾಲೆಗೆ ಸ್ವಾಗತಿಸಲಾಯಿತು.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅಕ್ಷರ ಕಳಸದೊಂದಿಗೆ ಶಾಲೆ ಬಂದ ಮಕ್ಕಳಿಗೆ ಗುಲಾಬಿ ಹೂ ನೀಡಿ, ಸಿಹಿ ವಿತರಿಸಿ ಸ್ವಾಗತಿಸಲಾಯಿತು. ಶಾಲಾ ಪ್ರಾರಂಭೋತ್ಸವ ಅಂಗವಾಗಿ ಶಾಲೆಯನ್ನು ಸ್ವಚ್ಛಗೊಳಿಸಿ ಹೂ ಮತ್ತು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.
ಈ ವೇಳೆ ಶಾಲಾ ದಾಖಲಾತಿ ಆಂದೋಲನವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ, ಸದಸ್ಯರಾದ ಜ್ಯೋತಿ, ಸುಮಿತ್ರಾ, ಚೈತ್ರ, ಮಂಜುಳ, ರಕ್ಷಿತಾ, ಮಹಾಲಕ್ಷ್ಮಿ, ಮುಖ್ಯಶಿಕ್ಷಕಿ ಬಿ.ಎಸ್.ಲತಾ, ಸಹ ಶಿಕ್ಷಕ ಆರ್.ಸೋಮಣ್ಣ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.