ವಿರಾಜಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ಆರಂಭದಲ್ಲಿ ಗಣಪತಿ ಗುಡಿ, ಮಾರಿ ಗುಡಿಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಪಂಜರುಪೇಟೆಯಿಂದ ತಾಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಆಗಮಿಸಿ ಚುನಾವಣಾಧಿಕಾರಿ ಶಬಾನ ಎಂ.ಶೇಕ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೇಯಂಡ ವೀಣಾ ಅಚ್ಚಯ್ಯ, ಚೆಪ್ಪುಡಿರ ಅರುಣ್ ಮಾಚಯ್ಯ, ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ ಸಾಥ್ ನೀಡಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನತೆಗೆ ಮೂ ಸೌಕರ್ಯ ಒದಗಿಸುವಲ್ಲಿ ಹಿಂದುಳಿದಿದೆ. ಜನರು ಎರಡೂ ಸರ್ಕಾರಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದರಿಂದ ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ ಎಂದು ಪೊನ್ನಣ್ಣ ಹೇಳಿದರು.