ಮಂಗಳೂರು : ಅಡಕೆಯ ಹಳದಿ ಎಲೆ ರೋಗ ಹಾಗೂ ಎಲೆ ಚುಕ್ಕಿ ರೋಗದಿಂದ ಸಂಕಷ್ಟಕ್ಕೀಡಾಗಿರುವ ಅಡಕೆ ಕೃಷಿಕರ ಸಮಸ್ಯೆಗೆ ಕೇಂದ್ರ ಸರಕಾರ ಸ್ಪಂದನೆ ನೀಡಿದೆ. ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕ್ಯಾಂಪ್ಕೊ ಮತ್ತು ಇತರ ಸಹಕಾರ ಸಂಘಗಳ ಮನವಿಗೆ ಸ್ಪಂದಿಸಿದ ರೋಗ ಅಧ್ಯಯನಕ್ಕೆ ತಜ್ಞರ ಸಮಿತಿಯನ್ನು ರಚಿಸಿದ್ದಾರೆ.ಸಮಿತಿಯು ವೈಜ್ಞಾನಿಕ ಸಂಶೋಧನೆಯನ್ನು ನಡೆಸಿ ಪರಿಹಾರ ಕಂಡು ಹಿಡಿದು ವರದಿ ಸಲ್ಲಿಸಲು ಸೂಚಿಸಲಾಗಿದೆ.
ಸಚಿವರ ಈ ಕ್ರಮದಿಂದ ಅಡಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಮೂಡಿದೆ. ಕೇಂದ್ರ ಸಕಾರಾತ್ಮಕ ಸ್ಪಂದನೆಗೆ ಕ್ಯಾಂಪ್ಕೊ ಆಡಳಿತ ಮಂಡಳಿ ಎಲ್ಲ ಅಡಕೆ ಬೆಳೆಗಾರರ ಪರವಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
……………………………