ಚಿಕ್ಕಮಗಳೂರಿನ ಎಐಟಿ ವೃತ್ತದಲ್ಲಿ ಎಬಿವಿಪಿ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು ರಾಜ್ಯದ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನೂ ಈಡೇರಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು. ರಾಕೇಶ್ ಮರಡಿ, ಆದರ್ಶ, ಪ್ರಿಯಾ, ಸಂಜನಾ ಮತ್ತಿತರರಿದ್ದರು. 
ಜಿಲ್ಲೆ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ರಾಜ್ಯದ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನೂ ಈಡೇರಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ನಗರದ ಎಐಟಿ ವೃತ್ತದಲ್ಲಿ ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಈ ವೇಳೆ ಮಾತನಾಡಿದ ಎಬಿವಿಪಿ ಮುಖಂಡ ರಾಕೇಶ್ ಮರಡಿ, ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಿಗೆ ಪ್ರತಿ ತಿಂಗಳು ವೇತನ ಸರಿಯಾಗಿ ನೀಡುತ್ತಿಲ್ಲ. ಜೊತೆಗೆ ಅವರ ಯಾವುದೇ ಬೇಡಿಕೆಗಳನ್ನು ಈಡೇರಿಕೆ ಮಾಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷÈ ಧೋರಣೆ ತಳೆದಿದೆ. ಹೀಗಾಗಿ ಅತಿಥಿ ಉಪನ್ಯಾಸಕರು ಸರಿಯಾಗಿ ತರಗತಿ ನಡೆಸದಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದಲೂ ಸರ್ಕಾರಿ ಕಾಲೇಜುಗಳನ್ನು ನಿರ್ಲಕ್ಷÈ ಮಾಡುತ್ತಿದ್ದೆ. ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ಅತಿಥಿ ಉಪನ್ಯಾಸಕರನ್ನೇ ಅವಲಂಭಿಸಿ ಸರ್ಕಾರಿ ಕಾಲೇಜುಗಳು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುತ್ತಿವೆ. ಹೀಗಿದ್ದರೂ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸದಿರುವ ಪರಿಣಾಮ ವಿದ್ಯಾರ್ಥಿಗಳಿಗೆ ತಟ್ಟುತ್ತಿದೆ ಎಂದು ದೂರಿದರು.

ರಾಜಕಾರಣಿಗಳ ಮಕ್ಕಳು ಹಾಗೂ ಶ್ರೀಮಂತರ ಮಕ್ಕಳು ಪ್ರತಿಷ್ಠಿತ ಕಾಲೇಜುಗಳಲ್ಲಿ ಅಥವಾ ವಿದೇಶಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ ರಾಜಕಾರಣಿಗಳಿಗೆ ಬಡ ವಿದ್ಯಾರ್ಥಿಗಳ ಸಮಸ್ಯೆ ಅರ್ಥವಾಗುತ್ತಿಲ್ಲ. ಹೀಗಾಗಿಯೇ ಸರ್ಕಾರಿ ಕಾಲೇಜುಗಳಿಗೆ ಮೂಲ ಸೌಕರ್ಯ ಒದಗಿಸಲು, ಅತಿಥಿ ಉಪನ್ಯಾಸಕರಿಗೆ ವೇತನ ನೀಡಲು ಹಾಗೂ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲು ನಿರ್ಲಕ್ಷÈ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಯಕ್ಕೆ ಸರಿಯಾಗಿ ವೇತನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ನೇರವಾಗಿ ಹೋರಾಟ ನಡೆಸುತ್ತಿಲ್ಲ. ಬದಲಿಗೆ ತರಗತಿಗಳಿಗೆ ಸರಿಯಾಗಿ ಬರುತ್ತಿಲ್ಲ. ಇದರಿಂದಾಗಿ ಪಾಠ ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ. ಪರೀಕ್ಷೆ ಬಂದರೂ ಪಠ್ಯ ಪೂರ್ಣವಾಗದ ಸ್ಥಿತಿ ಇದೆ. ಹೀಗಾಗಿ ವಿದ್ಯಾರ್ಥಿಗಳು ಎಷ್ಟೇ ಬುದ್ದಿವಂತರಾಗಿದ್ದರೂ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸುವುದು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳ ಜೀವನ ಡೋಲಾಯಮಾನವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರಾದ ಆದರ್ಶ, ಪ್ರಿಯಾ, ಸಂಜನಾ ಮತ್ತಿತರರಿದ್ದರು.