ಜಿಲ್ಲೆ

ಅತಿಥಿ ಉಪನ್ಯಾಸಕರ ವಿಚಾರದಲ್ಲಿ ಮಲತಾಯಿ ಧೋರಣೆ

Kolar

ಕೋಲಾರ: ಪ್ರತಿ ಅತಿಥಿ ಉಪನ್ಯಾಸಕರಿಗೆ ಸ್ವಯಂ ಉದ್ಯೋಗ ವಾಡಲು 10 ಲಕ್ಷ ರೂ. ಬಡ್ಡಿ ರಹಿತ ಸಾಲ ನೀಡಬೇಕು ಎಂದು ರೈತ ಸಂದ ಮಹಿಳಾ ಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಸರ್ಕಾರವನ್ನು ಒತ್ತಾಯಿಸಿದರು.

ನಗರದ ಸರ್ವಜ್ಞ ಪಾರ್ಕ್ ಬಳಿ ಸೋಮವಾರ ಅತಿಥಿ ಉಪನ್ಯಾಸಕರ ಹೋರಾಟದಲ್ಲಿ ಭಾಗವಹಿಸಿ ವಾತನಾಡಿದರು. ಹೊಸ ಶಿಕ್ಷಣ ನೀತಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದ್ದು, ಈ ನೀತಿ ಸ್ಪರ್ಧಾತ್ಮಕ ಯುಗದಲ್ಲಿ ಯುವ ಸಮೂಹವನ್ನು ಸಜ್ಜುಗೊಳಿಸಲು ಸಹಕಾರಿ ಎಂದು ಹೇಳುವ ಸರ್ಕಾರ, ಅತಿಥಿ ಉಪನ್ಯಾಸಕರ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಅವರ ಪ್ರಾವಾಣಿಕ ಬೇಡಿಕೆಗಳನ್ನು ಗಣನೆಗೆ ತೆಗೆದುಕೊಳ್ಳದೆ ಲಕ್ಷಾಂತರ ವಿದ್ಯಾರ್ಥಿಗಳ ಜೀವನದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ಉಪಾಧ್ಯಕ್ಷ ಕೆ.ನಾರಾಯಣಗೌಡ ವಾತನಾಡಿ, ಕರೊನಾ ಕಾರಣ ಎರಡು ವರ್ಷ ಕಾಲೇಜುಗಳಲ್ಲಿ ತರಗತಿ ನಡೆಯಲಿಲ್ಲ. ಇನ್ನೇನು ಕಾಲೇಜು ಪ್ರಾರಂಭವಾಯಿತು ಎನ್ನುವಷ್ಟರಲ್ಲಿ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಧರಣಿ ಹೂಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ ಎಂದರು.

ಜಿಲ್ಲಾಧ್ಯಕ್ಷ ಐತಂಡಹಳ್ಳಿ ಮಂಜುನಾಥ ವಾತನಾಡಿ, 1520 ವರ್ಷದಿಂದ ಪದವಿ ಕಾಲೇಜುಗಳಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಲ್ಲಿ ಸರ್ಕಾರ ಮತ್ತು ಉನ್ನತ ಶಿಕ್ಷಣ ಇಲಾಖೆ ನಿರುತ್ಸಾಹ ತೋರುತ್ತಿದೆ. ಗೌರವಧನ ಪಡೆಯಲು ಪ್ರಾಂಶುಪಾಲರ ಮುಂದೆ ಇವರು ವಾರಗಟ್ಟಲೆ ಕೈಕಟ್ಟಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಕೂಡಲೆ ಇವರ ಸಮಸ್ಯೆ ಬಗೆಹರಿಸಲು ಯತ್ನಿಸಬೇಕು, ಇಲ್ಲವಾದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಡಲೆಕಾಯಿ ವಾರುವ ಮೂಲಕ ಹೋರಾಟಗಾರರು ಸರ್ಕಾರದ ಗಮನ ಸೆಳೆಯಲಾಯಿತು. ತಹಸೀಲ್ದಾರ್ ನಾಗರಾಜು ಅವರಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ, ಮಂಗಸಂದ್ರ ತಿಮ್ಮಣ್ಣ, ನಗರ ಸಂಚಾಲಕ ನಾಗೇಶ್, ವಾಲೂರು ತಾಲೂಕು ಅಧ್ಯಕ್ಷ ಪೆಮ್ಮದೊಡ್ಡಿ ಯಲ್ಲಣ್ಣ, ಮುಖಂಡರಾದ ಹರೀಶ್, ಕೂವಣ್ಣ, ವೆಂಕಟೇಶಪ್ಪ, ಅಶ್ವತ್ಥಪ್ಪ, ಚಂದ್ರಪ್ಪ, ಶಿವಾರೆಡ್ಡಿ, ಮರಗಲ್ ಮುನಿಯಪ್ಪ ಇತರರಿಇದ್ದರು.