ಜಿಲ್ಲೆ

ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಅಥವಾ ಖಾಯಂ ಸಿಬ್ಬಂದಿ ನೇಮಕವಾಗುವವರೆಗೆ ತಾತ್ಕಾಲಿಕವಾಗಿ ನಿಯಮಾನುಸಾರ ಹಿಂದಿ ಭಾಷಾ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಪ್ರೌಢಶಾಲಾ ಕನಿಷ್ಠ ವಿದ್ಯಾರ್ಹತೆಯಾದ ಪದವಿಯೊಂದಿಗೆ ಬಿ.ಇಡಿ ಮಾಡಿರಬೇಕು. ಅರ್ಜಿಗಳನ್ನು ಹರದನಹಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಜು.12ರೊಳಗೆ ಸಲ್ಲಿಸಬೇಕು ಎಂದು ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.