ಕಲಬುರಗಿ: ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ೨೦೨೩ ಮಾರ್ಚ್ ೩ರಂದು ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಅಪರಾಧಿಗೆ ೨೦ ವರ್ಷ ಜೈಲು ಶಿಕ್ಷೆ ವಿಧಿಸಿ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಆದೇಶಿಸಿದ್ದಾರೆ. ೨೦೨೩ ಮಾರ್ಚ್ ೩ರಂದು ಬಯಲು ಶೌಚಕ್ಕೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದ ೧೩ ವರ್ಷದ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ ಅಪರಾಧಿ ಧರ್ಮರಾಜ ಘೋಡಕೆ ಅತ್ಯಾಚಾರ ಎಸಗಿದ್ದ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ವಿರುದ್ಧ ಪಿಐ ಮಹಾದೇವ ಪಂಚಮುಖಿ ತನಿಖೆ ನಡೆಸಿ, ಪೋಕ್ಸೋ ಕಾಯ್ದೆ ಅಡಿ ದೋಷಾರೋಪಣೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಅಪರಾಧಿಗೆ ೨೦ ವರ್ಷ ಜೈಲು, ೨೦ ಸಾವಿರ ರೂ. ದಂಡ ವಿಧಿಸಿದ್ದು, ದಂಡ ಕೊಡಲು ತಪ್ಪಿದಲ್ಲಿ ಆರು ತಿಂಗಳು ಸಾಧಾ ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ ಏಳು ಲಕ್ಷ ರೂ. ಕಾನೂನು ಪ್ರಾಧಿಕಾರದಿಂದ ಪರಿಹಾರವಾಗಿ ನೀಡಬೇಕು ಎಂದು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶಾಂತವೀರ ತುಪ್ಪದ ಸರ್ಕಾರದ ಪರ ವಾದಿಸಿದ್ದರು. ಆಳಂದ ಠಾಣೆ ಸಿಬ್ಬಂದಿ ರಾಜಕುಮಾರ, ಗುಂಡುರಾವ ಸಾಕ್ಷಿದರ ಹಾಜರುಪಡಿಸಿದ್ದರು.