ಬಾಗಲಕೋಟೆ: ಅಪ್ರಾಪ್ತ ಬಾಲಕಿಯ ಮೇಳೆ ಅತ್ಯಾಚಾರ ಎಸಗಿದ ಅಪರಾಧಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧಿಶೆ ಪಿ.ಎಸ್.ಸದರಜೋಶಿ ೨೦ ವರ್ಷ ಕಠಿಣ ಶಿಕ್ಷೆ, ೪ ಲಕ್ಷ ರೂ. ದಂಡ ವಿಽಸಿ ಗುರುವಾರ ತೀರ್ಪು ನೀಡಿದ್ದಾರೆ.
ಬಸವರಾಜ ಗುರಿಕಾರ ಶಿಕ್ಷೆಗೆ ಗುರಿಯಾದ ಅಪರಾಧಿ. ಇಳಕಲ್ಲ ತಾಲೂಕಿನ ಕೆಲೂರ ಗ್ರಾಮದವನಾಗಿದ್ದು, ಅಪ್ರಾಪ್ತ ಬಾಲಕಿ ಮೇಲೆ ಕಬ್ಬಿನ ಹೊಲದಲ್ಲಿ ಅತ್ಯಾಚಾರ ಎಸಗಿದ್ದನು. ಈ ಕುರಿತು ಅಮೀನಗಡ ಪೊಲೀಸ್ ಠಾಣೆಯಲ್ಲಿ ೨೦೨೪ ರಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಡಿವೈಎಸ್‌ಪಿ ವಿಶ್ವನಾಥರಾವ ಕುಲಕರ್ಣಿ ನಾಯ್ಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಪೋಕ್ಸೋ ಕಾಯ್ದೆ ಅಡಿ ೨೦ ವರ್ಷ ಕಠಿಣ ಶಿಕ್ಷೆ, ೪ ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿ.ಜಿ.ಹೆಬಸೂರ ವಾದ ಮಂಡಿಸಿದ್ದರು.