ಜಿಲ್ಲೆ

ಅತ್ಯಾಚಾರಕ್ಕೆ ಯತ್ನಿಸಿದ ಅಸ್ಸಾಂ ಕಾರ್ಮಿಕ

ಸೋಮವಾರಪೇಟೆ: ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿದ್ದಾನೆ.

ಅಸ್ಸಾಂ ರಾಜ್ಯದ ಗೋಲ್‌ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲಾ (28) ಆರೋಪಿಯಾಗಿದ್ದು, ಸೋಮವಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿ, ಮೊಕದ್ದಮೆ ದಾಖಲಿಸಿ ವಿಚಾರಣೆ ಕೈಗೊಂಡಿದ್ದಾರೆ.

ಮಹಿಳೆಯೊಬ್ಬರು ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಲು ಕಾರೇಕೊಪ್ಪ ಬಸ್ ಸೆಲ್ಟರ್ ನಿಂತಿದ್ದಾಗ ಆರೋಪಿ, ಮಹಿಳೆಯ ಬಾಯಿ ಮುಚ್ಚಿ, ತಲೆಕೂದಲನ್ನು ಹಿಡಿದು ಎಳೆದು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ ಈ ಸಂದರ್ಭ ಮಹಿಳೆ ಕೂಗಿಕೊಂಡಾಗ ಸ್ಥಳೀಯರು ಬಂದು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸ್ ಉಪ ನಿರೀಕ್ಷಕ ಎಂ.ಎ.ಗೋಪಾಲ್ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.