ಜಿಲ್ಲೆ

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಿ

ಕಲಬುರಗಿ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಯುವತಿಗೆ ಮಾದಕ ವಸ್ತು ನೀಡಿ, ಅತ್ಯಾಚಾರ ಮಾಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭೋವಿ ವಡ್ಡರ್ ಸಮಾಜದ ಜಿಲ್ಲಾಧ್ಯಕ್ಷ ಗುಂಡಪ್ಪ ಸಾಳಂಕೆ ಆಗ್ರಹಿಸಿದರು. ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದವರನ್ನು ನಡು ರಸ್ತೆಯಲ್ಲಿ ನಿಲ್ಲಿಸಿ, ಗುಂಡು ಹಾರಿಸಬೇಕು. ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು. ಯುವತಿ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ಉಡುಪಿ ಜಿಲ್ಲಾಧಿಕಾರಿಗಳು ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು. ಪ್ರಮುಖರಾದ ತಿಪ್ಪಣ್ಣ ಒಡೆಯರಾಜ, ವಿಠಲ್ ನೆಲೋಗಿ, ರಾಜು ಮೇಸ್ತಿç, ರಾಮಯ್ಯ ಪೂಜಾರಿ ಇತರರಿದ್ದರು.