ಚಿತ್ರದುರ್ಗ: ರೈಲ್ವೆ ಯೋಜನೆಗೆ ಭೂಸ್ವಾಧೀನ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್‌ಅದಾಲತ್‌ನಲ್ಲಿ ಇತ್ಯರ್ಥಕ್ಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಗುರುವಾರ ಕರೆದಿದ್ದ ಸಭೆಯಲ್ಲಿ, ರೈಲ್ವೆ ಯೋಜನೆಗಳ ಭೂಸ್ವಾಧೀನ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ. ಇವುಗಳನ್ನು ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆ ಬಾಕಿ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ ಕಾಮಗಾರಿ ಪ್ರಾರಂಭಿಸಬೇಕು ಎಂದರು.
ಎಡಿಸಿ ಬಿ.ಟಿ. ಕುಮಾರಸ್ವಾಮಿ, ಎಸಿ ಎಂ. ಕಾರ್ತಿಕ್, ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಡಿವಿಜನಲ್ ಇಂಜಿನಿಯರ್ ರಜತ್‌ತೆನಿಯಾ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್‌ನಾಯ್ಕ ಮತ್ತಿತರ ಅಧಿಕಾರಿಗಳಿದ್ದರು.