ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಕುರಿತು ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಸಿಇಒ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ ಇತರರು ಇದ್ದರು. 
ಜಿಲ್ಲೆ

ಅದ್ಧೂರಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಜ.೨೬ ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ, ವಿಶಿಷ್ಠ ಹಾಗೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.

ಜಿಲ್ಲಾಽಕಾರಿ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಕುರಿತು ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ ೮ ಗಂಟೆಗೆ ಜಿಲ್ಲಾಡಳಿತ ಭವನದ ಕಟ್ಟಡದ ಮೇಲೆ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಜಹಣ ಹಾಗೂ ಸಚಿವರಿಂದ ಗಣರಾಜ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಪಥಸಂಚಲನ ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ ಆ್ಯಂಡ್ ಗೈಡ್ಸ್, ಎನ್.ಸಿ.ಸಿ. ಕೆಡೆಟ್‌ಗಳನ್ನು ಆಹ್ವಾನಿಸಲು ಸೂಚಿಸಲಾಯಿತು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೊಲೀಸ್ ಇಲಾಖೆ, ತಹಸೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಽಕಾರಿಗಳಿಗೆ ವಹಿಸಲಾಯಿತು. ಕಾರ್ಯಕ್ರಮಗಳ ಸಿದ್ದತೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಪೂರ್ವ ತಯಾರಿಗಾಗಿ ಉಪ ಸಮಿತಿಗಳ ಸಭೆ ಕರೆದು ಬೇಕಾಗುವ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು.

ಸಂಪೂರ್ಣವಾಗಿ ಪ್ಲಾಸ್ಟಿಕ್ ಧ್ವಜ ಬಳಸುವುದನ್ನು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಧ್ವಜಗಳನ್ನು ತರುವುದನ್ನು ನಿರ್ಭಂದಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿವೇಕಾನಂದ ಅವರಿಗೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ತಿಳಿಸಿದರು. ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಗಣ್ಯರಿಗೆ ಶಾಸಕರಿಗೆ, ಸಂಸದರುಗಳಿಗೆ ಹಾಗೂ ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ, ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನ ಹಾಗೂ ತಾಲೂಕ ಭವನಕ್ಕೆ ವಿದ್ಯುತ್ ಅಲಂಕಾರ ಮಾಡುವಂತೆ ತಿಳಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ರಾಷ್ಟ್ರ ಕುವೆಂಪುರವರ ವಿರಚಿತ ನೇಗಿಲಯೋಗಿ ಹಾಡನ್ನು ರಾಷ್ಟ್ರಗೀತೆ ನಂತರ ಪರಿಣಿತ ಕಲಾವಿದರಿಂದ ಹಾಡಿಸಲು ತಳಿಸಲಾಯಿತು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡುವುದು, ಗಣರಾಜ್ಯೋತ್ಸವ ದಿನದಂದು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ರಿಯರ್ಸಲ್ ದಿನದಂದು ಕ್ರೀಡಾಂಗಣಕ್ಕೆ ಹೋಗಿ ಬರಲು ರಿಯಾಯಿತಿ ದರದಲ್ಲಿ ವಾಹನ ವ್ಯವಸ್ಥೆ ಕಲ್ಪಿಸಲು ತಿಳಿಸಲಾಯಿತು.

ಸದರಿ ದಿನದಂದು ಪೊಲೀಸ್ ಬಂದೂಬಸ್ತ್ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಯಿತು. ರಾಷ್ಟ್ರೀಯ ಕಾರ್ಯಕ್ರಮವಾಗಿರುವದರಿಂದ ಜಿಲ್ಲೆಯ ಎಲ್ಲ ಅಽಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಸಿಇಒ ಶಶಿಧರ ಕುರೇರ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ವಿವೇಕಾನಂದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.