ಜಿಲ್ಲೆ

ಅಧಿಕಾರ ದುರ್ಬಳಕೆ ಆರೋಪ; ಶಾಸಕ ಬೆಲ್ಲದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Dharwad

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಾಸಕ ಅರವಿಂದ ಬೆಲ್ಲದ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಮನೆಯಲ್ಲಿ ಆಶ್ರಯ ಮನೆಗಳ ಹಕ್ಕುಪತ್ರ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಹು-ಧಾ ಪಶ್ಚಿಮ ಕ್ಷೇತ್ರ ವ್ಯಾಪ್ತಿಯ ರಾಜೀವಗಾಂಧಿನಗರ, ರಾಮನಗರ, ಜಗದೀಶನಗರ, ವಾಜಪೇಯಿನಗರ ನಿವಾಸಿಗಳ ಮನೆಗಳು ಡೋರ್ ಲಾಕ್ ಇವೆ ಎಂದು ಆರೋಪಿಸಿ ತಮ್ಮ 150 ಕಾರ್ಯಕರ್ತರಿಗೆ ಆಶ್ರಯ ಮನೆಗಳ ಹಕ್ಕುಪತ್ರ ವಿತರಿಸುತ್ತಿದ್ದಾರೆ. ಈ ಪ್ರದೇಶಗಳ ನಿವಾಸಿಗಳಿಗೆ ಯಾವುದೇ ಮೂಲ ಸೌಕರ್ಯ ಕಲ್ಪಿಸಿಲ್ಲ. ಜನರು ಅಲ್ಲಿ ವಾಸಿಸುತ್ತಿಲ್ಲ ಎಂದು ಕಾರ್ಯಕರ್ತರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇದು ಕಾನೂನುಬಾಹಿರ ಕ್ರಮವಾಗಿದ್ದು, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮಹಾನಗರ ಜಿಲ್ಲಾಧ್ಯಕ್ಷ ಅಲ್ತ್ಾ ಹಳ್ಳೂರ, ರಾಣಿ ಚನ್ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗೌರಿ, ಮುಖಂಡರಾದ ದೀಪಕ ಚಿಂಚೋರೆ, ರಾಬರ್ಟ್ ದದ್ದಾಪುರಿ, ಅಲ್ತ್ಾ ಕಿತ್ತೂರ, ಕವಿತಾ ಕಬ್ಬೇರ, ಸ್ವಾತಿ ಮಾಳಗಿ, ಗೌರಮ್ಮ ಬಲೋಗಿ, ಇತರರು ಪಾಲ್ಗೊಂಡಿದ್ದರು.