ಶಹಾಪುರ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸುವ ಅನಾಹುತ ತಡೆಗೆ ಎಲ್ಲ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ತಹಸೀಲ್ದಾರ್ ಉಮಾಕಾಂತ ಹಳ್ಳೆ ಸೂಚನೆ ನೀಡಿದರು.
ಗುರುವಾರ ನಗರದ ತಾಪಂ ಕಚೇರಿಯಲ್ಲಿ ಕರೆದಿದ್ದ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿ, ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲೆಯನ್ನು ಯಲ್ಲೊ ಹಾಗೂ ರೆಡ್ ಜೋನ್‌ನಲ್ಲಿ ಗುರುತಿಸಿದೆ. ಹೀಗಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.
ಗ್ರಾಮೀಣ ಪ್ರದೇಶದ ಜನ-ಜಾನುವಾರುಗಳ ಜೀವ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಎನ್‌ಡಿಆರ್‌ಎï ನಿಯಮದ ಪ್ರಕಾರ ಮನೆ ಹಾಗೂ ಬೆಳೆ ಹಾನಿಗೆ ಸಂಬAಧಿಸಿದAತೆ ಸಂತ್ರಸ್ತರಿಗೆ ಹಾನಿ ಸಂಭವಿಸಿದ ೨೪ ಗಂಟೆಯಲ್ಲಿ ಸೂಕ್ತ ಪರಿಹಾರ ವಿತರಣೆ ಮಾಡಬೇಕಿದೆ. ಹೀಗಾಗಿ ಜಂಟಿ ಸಮೀಕ್ಷೆ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ತಾಪಂ ಇಒ ಸೋಮಶೇಖರ ಬಿರಾದಾರ ಮಾತನಾಡಿ, ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ಮತ್ತು ಭೀಮಾ ನದಿಗಳಿಗೆ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರು ಬಿಡಲಾಗುತ್ತಿದೆ. ಜನರು ನದಿಪಾತ್ರಕ್ಕೆ ಇಳಿಯದಂತೆ ಜಾಗೃತಿ ಮೂಡಿಸಬೇಕು ಎಂದರು.
ಸಹಾಯಕ ನಿರ್ದೇಶಕ ಭೀಮರಾಯ ಬಿರಾದಾರ, ಅಜೀತ್‌ಕುಮಾರ ಇದ್ದರು.