ಗೋಕಾಕ: ಕೆಲ ದಿನಗಳಿಂದ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗುತ್ತಿದ್ದು, ಅಧಿಕಾರಿಗಳು ವೇಗ ಹೆಚ್ಚಿಸಬೇಕು. ಸಾರ್ವಜನಿಕರಿಂದ ಹಣ ಪಡೆದು ಸರ್ಕಾರಿ ಸೇವೆ ನೀಡುವ ದೂರುಗಳು ಬರುತ್ತಿವೆ. ಅಂತಹವರನ್ನು ಗುರುತಿಸಿ ಕ್ರಮಕೆಗೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ನಗರದ ತಾಪಂ ಸಭಾಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯತೆ ವಹಿಸಿ ಮಾತನಾಡಿದರು. ಸರ್ಕಾರದ ಯೋಜನೆಯ ಲಾನುಭವಿಗಳಿಂದ ಹಣ ವಸೂಲಿ ಮಾಡುವುದು. ಸರಿಯಾಗಿ ಕಾರ್ಯನಿರ್ವಹಿಸದ ದೂರುಗಳು ಬಂದಿದ್ದು, ಅಂತಹ ಅಧಿಕಾರಿಗಳನ್ನು ಶಿೆಗೆ ಒಳಪಡಿಸಬೇಕು ಎಂದರು.
ಜನಪರ ಆಡಳಿತ ನೀಡದವರು ನಮ್ಮ ತಾಲೂಕಿಗೆ ಅವಶ್ಯಕತೆ ಇಲ್ಲ. ಅವರು ತಾವೇ ವರ್ಗಾವಣೆಯಾಗಬಹುದು. ಜನರ ಸೇವೆ ಮಾಡುವವರು ಮಾತ್ರ ಇಲ್ಲಿರಬೇಕು. ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಗರದ ತಾಯಿ&ಮಕ್ಕಳ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಸರ್ಕಾರದ ಗಮನಕ್ಕೆ ತಂದು ಹೆಚ್ಚಿನ ಸಿಬ್ಬಂದಿ ತರಲು ಶ್ರಮಿಸುತ್ತೇನೆ. ಗರ್ಭಿಣಿಯರಿಗೆ ರಾತ್ರಿ ಸಮಯದಲ್ಲಿ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಕಮಿಷನ್ ಆಸೆಗೆ ಖಾಸಗಿ ಆಸ್ಪತ್ರೆಗೆ ಕಳುಹಿಸುತ್ತಿರುವುದು ಗಮನಕ್ಕೆ ಬಂದಿದ್ದು, ಅವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದರು.
ರಾಜ್ಯದಲ್ಲಿ ಡೆಂ ಜ್ವರ ಹೆಚ್ಚುತ್ತಿದ್ದು ಆರೋಗ್ಯ ಇಲಾಖೆ ಮತ್ತು ಸ್ಥಳಿಯ ಸಂಸ್ಥೆಗಳು ರೋಗರುಜಿನಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಗರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಮನೆಗಳ ಉತಾರ ಪಡೆಯಲು ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಅಂತವರನ್ನು ಕೂಡಲೇ ಸಸ್ಪೆಂಡ್ ಮಾಡುವಂತೆ ಮೇಲಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಕೆಲವು ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಸರಿಯಾಗಿ ಶಾಲೆಗೆ ಬಾರದಿರುವುದು ಕಂಡುಬಂದಿದ್ದು, ಶಿಸ್ತುಕ್ರಮ ಜರುಗಿಸಬೇಕು. ಅಂಬೇಡ್ಕರ್ ವಸತಿ ಶಾಲೆಯಲ್ಲಿಯೂ ಗುಣಮಟ್ಟದ ಶಿಣ, ಆಹಾರ ಒದಗಿಸುತ್ತಿಲ್ಲ ಎಂಬ ದೂರುಗಳಿದ್ದು, ಸೂಕ್ತ ಕ್ರಮ ಕೆಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಸಮಯಕ್ಕೆ ಕೃಷಿ, ತೋಟಗಾರಿಕೆ ಇಲಾಖೆಯಿಂದ ಸವಲತ್ತು ಸಿಗುವಂತಾಗಬೇಕು. ಅಧಿಕಾರಿಗಳು ರೈತರಿಗೆ ಸರ್ಕಾರದ ಯೋಜನೆಗಳನ್ನು ತಿಳಿಸಿ, ಸದ್ಬಳಕೆ ಆಗುವಂತೆ ನೋಡಿಕೊಳ್ಳಬೇಕು. ಕೃಷಿ ಪರಿಕರಗಳು ಲಾನುಭವಿಗಳಿಗೆ ಸೇರುತ್ತಿಲ್ಲ. ಅಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಅಂತಹವರ ವಿರದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕಾಲುವೆಗಳ ಸ್ವಚ್ಛತೆಗೆ ಕ್ರಮವಹಿಸಿ, ನೀರು ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಹೆಸ್ಕಾಂನಿಂದ ರೈತರಿಗೆ ವಿದ್ಯುತ್ ಕಂಬ, ಟಿಸಿ ಸೇರಿ ಅವಶ್ಯಕ ಸೇವೆಗಳನ್ನು ಸರಿಯಾಗಿ ಒದಗಿಸಬೇಕೆಂದು ಸೂಚಿಸಿದರು. ತಹಸೀಲ್ದಾರ್ ಡಾ.ಮೋಹನ ಭಸ್ಮೆ, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಉದಯ ಕಾಂಬಳೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.