ಶ್ರವಣಬೆಳಗೊಳ: ಹೋಬಳಿಯ ಪೂಮಡಿಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎ.ಟಿ.ದೇವರಾಜ್ ಅವಿರೋಧ ಆಯ್ಕೆಯಾದರು.
ಪ್ರಸನ್ನ ಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಎ.ಟಿ.ದೇವರಾಜ್ ಹೊರತುಪಡಿಸಿ ಮತ್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ಘೋಷಿಸಲಾಯಿತು.
ಬಳಿಕ ಮಾತನಾಡಿದ ಅವರು, ಜಿಲ್ಲಾ ಸಹಕಾರ ಬ್ಯಾಂಕ್‌ನ ನಿರ್ದೇಶಕ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಸಹಕಾರ ಮತ್ತು ಮಾರ್ಗದರ್ಶನದೊಂದಿಗೆ ನಮ್ಮ ಸಂಘ ಈಗಾಗಲೇ 1600 ರೈತರಿಗೆ ಬೆಳೆ ಸಾಲ, ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಗುಂಪು ಸಾಲ, ವಾಹನ ಮತ್ತು ವ್ಯಾಪಾರ ಸಾಲ, ಪಿಗ್ಮಿ ಸಾಲ ಸೇರಿದಂತೆ ಅಂದಾಜು 17 ಕೋಟಿ ರೂ.ವಹಿವಾಟು ನಡೆಸುತ್ತಿದೆ. ಎಲ್ಲ ನಿರ್ದೇಶಕರ ಸಮನ್ವಯದೊಂದಿಗೆ ಷೇರುದಾರರು, ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.
ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯೇಂದ್ರ, ಎಚ್‌ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಎಸ್.ಆರ್.ಮಧು ಕರ್ತವ್ಯ ನಿರ್ವಹಿಸಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ಪರಮ ದೇವರಾಜೇಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕೃಷ್ಣೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪಿ.ಕೆ.ಮಂಜೇಗೌಡ, ಸೊಸೈಟಿ ಮಾಜಿ ಅಧ್ಯಕ್ಷ ಡಿ.ಎನ್.ಬಸವರಾಜ್, ಬೋರೇಗೌಡ, ಉಪಾಧ್ಯಕ್ಷೆ ಪ್ರಮಿಳಾ ರಂಗೇಗೌಡ, ಬಿ.ಕೆ.ವಾಸುದೇವ, ಪ್ರಭು, ಮಲ್ಲೇಶ್, ಬಾಬು, ನಿರ್ದೇಶಕರಾದ ಬಿ.ಎನ್.ನಾಗೇಗೌಡ, ಬಿ.ಸಿ.ನಂಜೇಗೌಡ, ಶ್ರೀನಿವಾಸ್, ಧರಣೇಂದ್ರ, ಸುನೀಲ್ ಕುಮಾರ್, ಪ್ರಸನ್ನ, ದೊಡ್ಡೇಗೌಡ, ರೇಣುಕಮ್ಮ, ರಾಮಯ್ಯ, ಕಾಂತರಾಜಪುರ ಗ್ರಾಪಂ ಮಾಜಿ ಅಧ್ಯಕ್ಷ ಮಹೇಂದ್ರ, ಸಿಇಒ ಪ್ರಕಾಶ್, ಸಿಬ್ಬಂದಿ ಉಪಸ್ಥಿತರಿದ್ದರು.