ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ ಟಿ.ಭೂಬಾಲನ್ ತಮ್ಮ ಜನುಮ ದಿನವನ್ನು
ನವನಗರದ ಸರ್ಕಾರಿ ಬಾಲಕರ ಬಾಲಮಂದಿರದ ಅನಾಥ ಮಕ್ಕಳೊಂದಿಗೆ ಸರಳವಾಗಿ ಮಂಗಳವಾರ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಉನ್ನತ ಹುದ್ದೆ ಅಲಂಕರಿಸಿ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು ಎಂದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಸಿ.ಶಿವಲಿಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಎನ್.ಪಾಟೀಲ, ಅಧೀಕ್ಷಕಿ ಜಯಮಾಲಾ ದೊಡಮನಿ ಸೇರಿದಂತೆ ಇತರರು ಇದ್ದರು.