?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಅನಿಲ್‌ಕುಮಾರ್ ಹನೂರು ಪಿಎಸಿಸಿಎಸ್ ಅಧ್ಯಕ್ಷ

ಹನೂರು: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಎಸ್.ಅನಿಲ್‌ಕುಮಾರ್, ಉಪಾಧ್ಯಕ್ಷೆಯಾಗಿ ಪುಷ್ಪಲತಾ ಜಯಗಳಿಸಿದರು.

ಮೇ 14ರಂದು ನಡೆದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಚುನಾವಣೆಯಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ ಮಾಜಿ ಶಾಸಕ ಆರ್.ನರೇಂದ್ರ ಹಾಗೂ ಸಾಲಗಾರರ ಕ್ಷೇತ್ರದಿಂದ 11 ನಿರ್ದೇಶಕರನ್ನು ಆಯ್ಕೆ ಮಾಡಲಾಗಿತ್ತು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಗುರುವಾರ ದಿನ ನಿಗದಿಪಡಿಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಎಸ್.ಅನಿಲ್‌ಕುಮಾರ್, ಜೆಡಿಎಸ್, ಬಿಜೆಪಿ ಮೈತ್ರಿ ಬೆಂಬಲಿತ ನಿರ್ದೇಶಕ ಲಿಂಗೇಗೌಡ ಹಾಗೂ ಇದರಂತೆಯೇ ಉಪಾಧ್ಯಕ್ಷ ಸ್ಥಾನಕ್ಕೆ ಪುಷ್ಪಲತಾ, ರಂಗಸ್ವಾಮಿ ನಾಯ್ಡು ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಅನಿಲ್‌ಕುಮಾರ್ 7 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ ಪುಷ್ಪಲತಾ 8 ಮತವನ್ನು ಪಡೆದು ಉಪಾಧ್ಯಕ್ಷರಾದರು. ಚುನಾವನಾಧಿಕಾರಿಯಾಗಿ ಸಹಕಾರ ಇಲಾಖೆಯ ನಾಗೇಶ್ ಕಾರ್ಯನಿರ್ವಹಿಸಿದರು.

ಅಭಿವೃದ್ಧಿಗೆ ಗೆಲುವು

ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ಎಂಡಿಸಿಸಿ ಬ್ಯಾಂಕ್‌ನಲ್ಲಿ ಹಿಂದೆ ರೈತರಿಗೆ ಸುಮಾರು 300 ಕೋಟಿ ರೂ.ಗಿಂತ ಹೆಚ್ಚು ಸಾಲ ನೀಡಲಾಗಿತ್ತು. ಇದರಲ್ಲಿ ಮೈಸೂರಿಗೆ 250 ಕೋಟಿ ರೂ., ಚಾ.ನಗರಕ್ಕೆ 28 ಕೋಟಿ ರೂ. ನೀಡಲಾಗಿತ್ತು. ನಾನು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷನಾದ ಬಳಿಕ ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಲಾಯಿತು. ಇದಕ್ಕೆ ಅಧಿಕಾರಿಗಳು ಮೈಸೂರು ಜಿಲ್ಲೆಯಿಂದ ಸಮರ್ಪಕವಾಗಿ ಸಾಲ ಮರು ಪಾವತಿಯಾಗುತ್ತಿದೆ ಎಂದು ತಿಳಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಾಗ ಮೈಸೂರು ಜಿಲ್ಲೆಯಿಂದ ಶೇ.56 ರಷ್ಟು ಸಾಲ ಮಾತ್ರ ಮರು ಪಾವತಿಯಾಗಿದ್ದರೆ, ಚಾ.ನಗರದಿಂದ ಶೇ.96ರಷ್ಟು ಸಾಲ ಮರು ಪಾವತಿಯಾಗಿತ್ತು. ಇದನ್ನು ಮನಗಂಡು ಚಾ.ನಗರಕ್ಕೆ ಹೆಚ್ಚಿನ ಆದ್ಯತೆ ನೀಡಿ ಎರಡೂವರೆ ವರ್ಷದ ಅವಧಿಯಲ್ಲಿ ಜಿಲ್ಲೆಗೆ 400 ಕೋಟಿ ರೂ. ಸಾಲ ಮಂಜೂರು ಮಾಡಲಾಗಿತ್ತು. ಈ ಮೂಲಕ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಹಾಗೆಯೇ ಪ್ರತಿ ವರ್ಷವು ಉತ್ತಮ ಲಾಭದತ್ತ ಸಾಗುತ್ತಿರುವ ಪಟ್ಟಣದ ಪಿಎಸಿಸಿ ಬ್ಯಾಂಕ್ ಕಟ್ಟಡ ನಿರ್ಮಾಣಕ್ಕೂ ಅನುದಾನ ನೀಡಲಾಗಿತ್ತು. ಇದೀಗ 1.75 ಕೋಟಿ ರೂ ವೆಚ್ಚದಲ್ಲಿನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು ಎಂದರು.

ಈವರೆಗೂ ಸಹಕಾರ ಸಂಘಗಳಿಗೆ ಚುನಾವಣೆ ನಡೆದಿರಲಿಲ್ಲ. ಅವಿರೋಧವಾಗಿ ಆಯ್ಕೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಜೆಡಿಎಸ್ ಹಾಗೂ ಬಿಜೆಪಿಯ ಕೆಲವು ಮುಖಂಡರು ರಾಜಕೀಯ ಪಿತೂರಿ ನಡೆಸಿದ ಪರಿಣಾಮ ಚುನಾವಣೆ ನಡೆಯುವಂತಾಯಿತು. ಆದರೆ ಕೈಗೊಂಡ ಅಭಿವೃದ್ಧಿ ಕಾರ್ಯಗಳಿಂದಾಗಿ ಜಯ ಸಿಕ್ಕಿದೆ ಎಂದರು.