ರಾಯಚೂರಿನ ಜಿಲ್ಲಾಕಾರಿ ಸಭಾಂಗಣದಲ್ಲಿ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಅಧ್ಯಕ್ಷತೆಯಲ್ಲಿ ಮಂಗಳವಾರ ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ ಇದ್ದರು. 
ಜಿಲ್ಲೆ

ಅನುದಾನ ಖರ್ಚು ಮಾಡುವುದು ಕಡ್ಡಾಯ

ರಾಯಚೂರು: ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮ ಅನುಷ್ಠಾನಕ್ಕೆ ಹಂಚಿಕೆಯಾದ ಅನುದಾನವನ್ನು ಖರ್ಚು ಮಾಡುವುದು ಕಡ್ಡಾಯವಾಗಿದೆ ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಅಕಾರಿಗಳಿಗೆ ತಿಳಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನುದಾನವನ್ನು ಖರ್ಚು ಮಾಡದೇ ನಿಗದಿತ ಗುರಿ ಸಾಸದಿರುವ ಇಲಾಖೆ ಅಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ ಅತ್ಯಂತ ಕಡಿಮೆ ಖರ್ಚು ಮಾಡಲಾಗಿದೆ. ಅನುದಾನವನ್ನು ಆಯಾ ಇಲಾಖೆಯಿಂದ ಖರ್ಚು ಮಾಡದೇ ಇದ್ದಲ್ಲಿ ಮುಂದಿನ ಅನುದಾನದ ಲಭ್ಯತೆ ಇರುವುದಿಲ್ಲ. ಕಾರಣ ಅನುದಾನವನ್ನು ನಿಗದಿತ ಅವಯೊಳಗೆ ಖರ್ಚು ಮಾಡಬೇಕು.
ಪ್ರತಿಯೊಂದು ಇಲಾಖೆ ಅಕಾರಿಗಳು ಕಾಮಗಾರಿಗಳನ್ನು ವೇಗವಾಗಿ ಮುಗಿಸಬೇಕು. ಬಿಡುಗಡೆಯಾದ ಅನುದಾನವನ್ನು ಮುತುವರ್ಜಿ ವಹಿಸಿ ಖರ್ಚು ಮಾಡಬೇಕು. ಸಕಾಲದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಹಾಕಿರುವುದನ್ನು ಪರಿಶೀಲಿಸಬೇಕು. ಪ್ರತಿಯೊಂದು ಯೋಜನೆಯ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಡಾ.ಕೆ.ಆರ್.ದುರಗೇಶ ಹೇಳಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಉಪಸ್ಥಿತರಿದ್ದರು.