ಜಿಲ್ಲೆ

ಅನುದಾನ ಬಿಡುಗಡೆಗೆ ಒತ್ತಡ ತನ್ನಿ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ನಗರದ ದವಳಗಿರಿ ಬಡಾವಣೆಯಲ್ಲಿ ಕುರುಬ ಸಮಾಜ ನಿರ್ಮಿಸಲು ಉದ್ದೇಶಿರುವ ಶಾಲಾ ಕಟ್ಟಡದ ಸ್ಥಳಕ್ಕೆ ಮಾಜಿ ಸಚಿವ ಎಚ್.ಎಂ.ರೇವಣ್ಣ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಮಹಾಸಂಸ್ಥಾನ, ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದ ಹೆಸರಲ್ಲಿರುವ 22 ಸಾವಿರ ಚದುರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 6 ಕೋಟಿ ರೂ. ವೆಚ್ಚದಲ್ಲಿ 1ರಿಂದ 7ನೇ ತರಗತಿವರೆಗಿನ ಶಾಲಾ ಕಟ್ಟಡದ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗಿದೆ. ಈಗಾಗಲೇ ಅನುದಾನ ಕೋರಿ ಜಿಲ್ಲಾ ಕುರುಬ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರುವಂತೆ ಸಮಾಜದ ಮುಖಂಡರು ಮನವಿ ಮಾಡಿದರು.
ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಸ್.ಶ್ರೀರಾಮ್, ಮುಖಂಡರಾದ ಎಂ.ವಿ.ಮಾಲತೇಶ್, ಎಸ್‌ಬಿಎಲ್ ಮಲ್ಲಿಕಾರ್ಜುನ್, ಆರ್.ಮತ್ಯುಂಜಯ, ಉಮೇಶ್, ಕೆ.ಪಿ.ಶಿವರಾಜ್, ಸುರೇಶ್ ಉಗ್ರಾಣ ಇತರರು ಇದ್ದರು.