ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಉಪಸ್ಥಿತರಿದ್ದರು. 
ಜಿಲ್ಲೆ

ಅನುವಂಶಿಕ ದೋಷಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ

ಚಿಕ್ಕಮಗಳೂರು: ಮಾನಸಿಕ ಅಸ್ವಸ್ಥತೆ ಹಾಗೂ ಗಮನ ಕೊರತೆ ಸೇರಿದಂತೆ ವಿವಿಧ ಅಂಗವೈಕಲ್ಯತೆಗೆ ಕಾರಣವಾಗಿರುವ ಅನುವಂಶಿಕ ದೋಷಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅವುಗಳನ್ನು ತಡೆಗಟ್ಟುವಲ್ಲಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಹದ ಯಾವುದಾದರೂ ಒಂದು ಅಥವಾ ಹೆಚ್ಚು ಅಂಗಗಳು ವ್ಯಕ್ತಿಯು ತನ್ನ ದೈನಂದಿನ ಚಟುವಟಿಕೆಗಳನ್ನು ಸ್ವತಃ ಮಾಡಿಕೊಳ್ಳಲು ಅಡೆತಡೆ ಉಂಟು ಮಾಡುತ್ತಿದ್ದರೆ ಅಥವಾ ದೀರ್ಘಕಾಲದಿಂದ ದೈಹಿಕ, ಮಾನಸಿಕ, ಬೌದ್ಧಿಕ ಅಥವಾ ಇಂದ್ರಿಯಗಳ ದುರ್ಬಲತೆ ಸಮಾಜದಲ್ಲಿ ಇತರರೊಂದಿಗೆ ಸಮಾನವಾಗಿ ಪಾಲ್ಗೊಳ್ಳಲು ಸಾಧ್ಯವಾಗದಂತೆ ಅಡ್ಡಿ ಅಡಚಣೆಗೆ ಒಳಗಾಗಿರುವ ವ್ಯಕ್ತಿಗೆ ವಿಕಲತೆಯ ಶೀಘ್ರ ಪತ್ತೆ ಹಚ್ಚುವಿಕೆ, ಶಿಕ್ಷಣ, ಉದ್ಯೋಗ, ತರಬೇತಿ, ಪುನರ್‌ಶ್ವೇತನ ಸಾಮಾಜಿಕ ಭದ್ರತೆ ಹಾಗೂ ಇತರೆ ಸೌಲಭ್ಯಗಳನ್ನು ಕಲ್ಪಿಸಿ ವಿಕಲಚೇತನರು ತಮ್ಮ ವಿಶೇಷ ಸಾಮರ್ಥ್ಯವನ್ನು ಎಲ್ಲ ಕ್ಷೇತ್ರಗಳಲ್ಲೂ ಸಂಪೂರ್ಣವಾಗಿ ಬಳಸಲು ಅವಕಾಶ ಕಲ್ಪಿಸಿಕೊಡಬೇಕು. ಈ ಮೂಲಕ ದೇಶದ ಕ್ರಿಯಾಶೀಲ ಪ್ರಜೆಗಳಾಗಲು ಅನುವು ಮಾಡಿಕೊಡುವ ಉz್ದೆÃಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಇವುಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದರು

ದೈಹಿಕ ಮತ್ತು ಮಾನಸಿಕ ಅಸಾಮರ್ಥ್ಯವು ಬಾಹ್ಯ ಕಾರಣದಿಂದ ಹಾಗೂ ಜನ್ಮ ಜಾತವಾಗಿಯು ಉಂಟಾಗುತ್ತದೆ. ಇಂತಹ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ವಿಶಿಷ್ಟ ಅಂಗವೈಕಲ್ಯ ಕಾರ್ಡ್ಗಳನ್ನು ವಿತರಿಸಿ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಒದಗಿಸಿ ಅವರ ಏಳಿಗೆಗೆ ಸಹಕರಿಸಬೇಕು. ಅನುವಂಶಿಕ ದೋಷಗಳಿಂದ ಉಂಟಾಗುವ ಅಂಗವೈಕಲ್ಯತೆಯ ಕುರಿತು ಪಾಲಕರಿಗೆ ಹಾಗೂ ಸಾರ್ವಜನಿಕರಲ್ಲಿ ಮಾಹಿತಿ ನೀಡಿ ಅವುಗಳನ್ನು ತಡೆಗಟ್ಟುವ ಕ್ರಮಗಳ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.

ತಪಾಸಣಾ ಶಿಬಿರಗಳ ಮೂಲಕ ಅಂಗವಿಕಲರನ್ನು ಗುರುತಿಸಿ ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಯನ್ನು ವಿತರಿಸಬೇಕು. ದೈಹಿಕ ಜೌದ್ಯೋಗಿಕ ವಾಕ್ ಚಿಕಿತ್ಸೆ ಹಾಗೂ ಇತರೆ ಸೇವೆಗಳನ್ನು ನೀಡುವುದರ ಜೊತೆಗೆ ಅಂಗವಿಕಲತೆಯ ಪ್ರಮಾಣ ಪತ್ರವನ್ನು ನೀಡಬೇಕು. ಅಂಗವಿಕಲತೆಯ ನಿವಾರಣೆಯ ಶಸ್ತç ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಪಾಲಕರಲ್ಲಿರುವ ಪೂರ್ವಗ್ರಹ ಮನೋಭಾವವನ್ನು ಹೋಗಲಾಡಿಸಬೇಕು. ಸ್ವಯಂ ಉದ್ಯೋಗ ಅರಸುವ ವಿಕಲಚೇತನರಿಗೆ ಬ್ಯಾಂಕ್ ಹಾಗೂ ಇತರೆ ಆರ್ಥಿಕ ಸಂಸ್ಥೆಗಳಿAದ ದೊರಕುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಬೇಕು. ವಿಕಲಚೇತನರ ತಂದೆ-ತಾಯಿ ಪಾಲÀಕರಿಗೆ ಸಮಾಲೋಚನಾ ಸಭೆಯನ್ನು ನಡೆಸಿ ಅವರನ್ನು ಸ್ವಾವಲಂಭಿಗಳಾಗಿಸಬೇಕು ಎಂದರು.

ಜಿಪA ಸಿಇಒ ಎಚ್.ಎಸ್.ಕೀರ್ತನಾ ಮಾತನಾಡಿ, ಜಿಲ್ಲೆಯಾದ್ಯಂತ ತಪಾಸಣಾ ಶಿಬಿರಗಳ ಮೂಲಕ ಗುರುತಿಸಿರುವ ದೃಷ್ಠಿ ದೋಷವಿರುವ ಅಂಗವಿಕಲ ಮಕ್ಕಳನ್ನು ನಿವೇದಿತಾ ಹಾಗೂ ಆಶಾಕಿರಣ ಅಂಧಮಕ್ಕಳ ಪಾಠ ಶಾಲೆಗಳಿಗೆ ದಾಖಲಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಬೇಕು. ತಮ್ಮ ಮಕ್ಕಳನ್ನು ವಿಕಲಚೇತನರೆಂದು ಪ್ರಮಾಣಿಕರಿಸಲು ಪಾಲಕರು ಹಿಂಜರಿದಲ್ಲಿ ಅವರಿಗೆ ಸಮಾಲೋಚನೆಯ ಮೂಲಕ ಸರ್ಕಾರದಿಂದ ದೊರಕುವ ವಿಶೇಷ ಸೌಲಭ್ಯಗಳ ಮಾಹಿತಿ ನೀಡಿ ಪ್ರಮಾಣ ಪತ್ರ ವಿತರಿಸಬೇಕು. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ವಿಕಲಚೇತನರಿಗೆ ತರಬೇತಿ ನೀಡಿ ಸೂಕ್ತ ಉದ್ಯೋಗದಲ್ಲಿ ತೊಡಗಿ ಆರ್ಥಿಕವಾಗಿ ಸಬಲರನ್ನಾಗಿಸಿ ವಿಕಲಚೇತನ ಸ್ನೇಹಿ ವಾತಾವರಣ ಕಲ್ಪಿಸಿಕೊಡಬೇಕು ಎಂದರು.

ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವೀರಭದ್ರಯ್ಯ ಗೌಡ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ವಿಶೇಷ ತಪಾಸಣೆ ನಡೆಸಿ ಅಂಗ ವೈಕಲ್ಯತೆ ಕಂಡು ಬರುವ ಮಕ್ಕಳ ಹಾಗೂ ಸಾರ್ವಜನಿಕರಿಗೆ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ. ಜೊತೆಗೆ ಸರ್ಕಾರದಿಂದ ದೊರಕಬಹುದಾದ ಸೌಲಭ್ಯಗಳ ಮಾಹಿತಿ ನೀಡಿ ಅಗತ್ಯವಿರುವ ಸಾಧನ ಸಲಕರಣೆಯನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ೨೨,೬೧೮ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿಗೆ ಅರ್ಜಿಗಳು ಬಂದಿದ್ದು, ಇವುಗಳಲ್ಲಿ ೧೫,೬೨೬ಮಂದಿಗೆ ಗುರುತಿನ ಚೀಟಿ ನೀಡಲಾಗಿದೆ. ಉಳಿಕೆ ಅರ್ಜಿಗಳನ್ನು ಪರಿಶೀಲಿಸಿ ಪ್ರತಿಯೊಬ್ಬರಿಗೂ ಗುರುತಿನ ಚೀಟಿ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ಜಿಲ್ಲಾ ಸರ್ಜನ್ ಮೋಹನ್ ಕುಮಾರ್, ಡಿ ಡಿಆರ್‌ಸಿ ಕಾರ್ಯದರ್ಶಿ ಕೆ.ಪ್ರಕಾಶ್ ಮತ್ತಿತರರಿದ್ದರು.