ಚಿಕ್ಕಮಗಳೂರಿನ ಕೆಂಪನಹಳ್ಳಿಯಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್ ಅನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಉದ್ಘಾಟಿಸಿದರು. ಬಿ.ಎಚ್.ಹರೀಶ್, ಎಂ.ಸಿ.ಶಿವಾನAದ ಸ್ವಾಮಿ, ಎಚ್.ಪಿ.ಮಂಜೇಗೌಡ, ಬಸವರಾಜ್ ಮತ್ತಿತರರಿದ್ದರು. 
ಜಿಲ್ಲೆ

ಅನ್ನ, ಆರೋಗ್ಯ, ಶಿಕ್ಷಣ ವ್ಯಾಪಾರದ ಸರಕಾಗಬಾರದು

ಚಿಕ್ಕಮಗಳೂರು: ಅನ್ನ, ಆರೋಗ್ಯ, ಶಿಕ್ಷಣ ಇವು ವ್ಯಾಪಾರದ ಸರಕಾಗದೆ ದಾನವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್ ಜನರ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಆಶಿಸಿದರು.

ನಗರದ ಕೆಂಪನಹಳ್ಳಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ಆರಂಭಿಸಿದ ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬರ ಜೀವನದಲ್ಲಿ ಆರೋಗ್ಯ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಇಂದು ಈ ಎರಡನ್ನು ಲಾಭದ ದೃಷ್ಟಿಯಲ್ಲಿ ನೋಡುತ್ತಿರುವುದು ವಿಷಾಧನೀಯ. ಬಡವರಿಗೆ ಆರೋಗ್ಯ ಸಮಸ್ಯೆ ಎದುರಾದಾಗ ತುರ್ತು ಚಿಕಿತ್ಸೆ ನೀಡಲು ನಮ್ಮ ಕ್ಲಿನಿಕ್ ಅವಶ್ಯಕತೆ ಇದೆ ಎಂದರು.

ಜಿಲ್ಲೆಗೆ ಒಟ್ಟು ೮ ನಮ್ಮ ಕ್ಲಿನಿಕ್ ಮಂಜೂರಾಗಿದ್ದು, ಈ ಪೈಕಿ ೩ ನಗರದ ವಿವಿಧೆಡೆ, ೧ ಕೆಂಪನಹಳ್ಳಿಯಲ್ಲಿ ಉದ್ಘಾಟನೆಯಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹಾಗೂ ಉಪ್ಪಳ್ಳಿಯಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಜನರ ಆರೋಗ್ಯ ಕಾಪಾಡುವಂತೆ ಜನಪ್ರತಿನಿಧಿಗಳಾದ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆಯೇ ಹೊರತು ಖಾಸಗಿ ನರ್ಸಿಂಗ್ ಹೋಂಗಳಿಗೆ ಅನುಕೂಲವಾಗಲಿ ಎಂಬ ಉz್ದೆÃಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಡವರು ವಾಸಿಸುತ್ತಿರುವ ಬಡಾವಣೆಗಳನ್ನು ಗುರುತಿಸಿ ಈ ಭಾಗದಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸುತ್ತಿರುವ ಉz್ದÉÃಶ ಬಡವರಿಗೆ ತಕ್ಷಣ ತುರ್ತು ಚಿಕಿತ್ಸೆ ದೊರೆಯಬೇಕು ಎಂಬುದು ಸರ್ಕಾರದ ಉz್ದÉÃಶ ಎಂದು ಹೇಳಿದರು.

ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ದಾದಿಯರು ನಗುಮುಖದಿಂದ ರೋಗಿಗಳ ಸೇವೆ ಮಾಡಬೇಕೆಂದು ಸೂಚಿಸಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಸುಮಾರು ೩೦೦ ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜ್ಯಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಮುಂದಿನ ಎಂಟು ತಿಂಗಳ ಒಳಗೆ ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಕ್ಲಿನಿಕ್ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಎಲ್ಲರಿಗೂ ಆರೋಗ್ಯ, ಶಿಕ್ಷಣ ದೊರೆಯಬೇಕೆಂಬ ಉz್ದÉÃಶದಿಂದ ಸರ್ಕಾರ ಕ್ಲಿನಿಕ್‌ಗಳನ್ನು ಆರಂಭಿಸುತ್ತಿದೆ. ರೋಗದ ಉಪಶಮನಕ್ಕೆ ಹಾಗೂ ರೋಗಿಗಳ ನೆರವಿಗೆ ನಮ್ಮ ಕ್ಲಿನಿಕ್ ನೆರವಾಗುತ್ತವೆ ಎಂದರು.

ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾದಾಗ ಪೊಲೀಸ್ ಠಾಣೆ ಆರಂಭಿಸುತ್ತಾರೆ. ಎಲ್ಲರೂ ರೋಗಗಳಿಂದ ಮುಕ್ತವಾದರೆ ಶಾಶ್ವತ ಪರಿಹಾರ ದೊರಕಿದಂತಾಗುತ್ತದೆ. ಆಸ್ಪತ್ರೆಗಳ ಸಂಖ್ಯೆ ಕಡಿಮೆಯಾಗಬೇಕಾದರೆ ಜೀವನ ಪದ್ದತಿಯಲ್ಲಿ ಬದಲಾವಣೆ ತರಬೇಕಾಗಿದೆ ಎಂದು ತಿಳಿಸಿದರು.

ಹಿಂದೆ ಕಾಲ್ನಡಿಗೆಯಲ್ಲಿ, ಎತ್ತಿನ ಗಾಡಿಯಲ್ಲಿ ಹೋಗುತ್ತಿದ್ದಾಗ ಜನ ಹೆಚ್ಚು ಸುಖಿಯಾಗಿದ್ದರು. ಈಗ ಬಿಪಿ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಾರಣ ವಾಹನಗಳಲ್ಲಿ ಓಡಾಟ, ಸುಖ ಜೀವನ ನಡೆಸುತ್ತಿರುವುದು ಎಂದು ವಿಷಾಧಿಸಿದರು.

ಒತ್ತಡದ ಬದುಕು ಮಾರಕ ಕಾಯಿಲೆಗಳಿಗೆ ಆಹ್ವಾನ ನೀಡುತ್ತದೆ. ಈ ನಿಟ್ಟಿನಲ್ಲಿ ಸರ್ವರಿಗೂ ಒತ್ತಡಮುಕ್ತ ಬದುಕು ಅಗತ್ಯವಾಗಿದ್ದು, ಜಗತ್ತು ನಮ್ಮ ತಲೆಮೇಲೆ ಬಿದ್ದಿದೆ ಎಂಬ ಭ್ರಮೆಯನ್ನು ಬಿಡಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್, ಸದಸ್ಯರಾದ ಲಲಿತಾಬಾಯಿ, ಲಕ್ಷö್ಮಣ್, ಮಂಜುಳಾ ಕೆ.ಆರ್, ಬಿ.ಎಚ್.ಹರೀಶ್, ಡಿಎಚ್‌ಓ ಡಾ. ಅಶ್ವಥ್‌ಬಾಬು, ಪ್ರಮುಖರಾದ ಎಚ್.ಪಿ.ಮಂಜೇಗೌಡ, ಎಂ.ಸಿ.ಶಿವಾನAದಸ್ವಾಮಿ, ಹರೀಶ್, ಪ್ರಕಾಶ್, ಪೌರಾಯುಕ್ತ ಬಿ.ಸಿ. ಬಸವರಾಜು, ಡಾ. ಶಶಿಕಲಾ, ಡಾ. ಪ್ರತ್ಯಕ್ಷ ಭೈರವ ಉಪಸ್ಥಿತರಿದ್ದರು.