ಜಿಲ್ಲೆ

ಅನ್ಯಾಯ ಸರಿಪಡಿಸಲು ಶಿಕ್ಷಕರು ಪಟ್ಟು

ಚಿತ್ರದುರ್ಗ: ಹೊಸ ವೃಂದ ಮತ್ತು ನೇಮಕ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕವಾದವರಿಗೆ ಪೂರ್ವಾನ್ವಯಗೊಳಿಸಬಾರದು ಎಂದು ಒತ್ತಾಯಿಸಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ತಾಲೂಕು ಸಂಘದ ಪದಾಧಿಕಾರಿಗಳು ತಹಸೀಲ್ದಾರ್‌ಗಳಿಗೆ ಮನವಿ ಸಲ್ಲಿಸಿದರು.
ಚಿತ್ರದುರ್ಗದಲ್ಲಿ ತಹಸೀಲ್ದಾರ್ ಡಾ.ನಾಗವೇಣಿ ಅವರಿಗೆ ಮನವಿ ಸಲ್ಲಿಸಿದ ಶಿಕ್ಷರು, ಅರ್ಹ ಶಿಕ್ಷಕರಿಗೆ ಪ್ರೌಢಶಾಲೆ ಶಿಕ್ಷಕರ ಹುದ್ದೆಗೆ ಹಾಗೂ ಸೇವಾ ಜೇಷ್ಠತೆ ಆಧರಿಸಿ ಮುಖ್ಯಶಿಕ್ಷಕ ಹುದ್ದೆಗೆ ಬಡ್ತಿ ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಬೇಡಿಕೆಗಳ ಈಡೇರಿಕೆಗೆ ಈ ಹಿಂದೆ ಹಲವು ಮನವಿಗಳನ್ನು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.ಆ.7ರಂದು ಜಿಲ್ಲಾಧಿಕಾರಿ, ಜಿಪಂ ಸಿಇಒಗಳಿಗೆ ಮನವಿ ಸಲ್ಲಿಸಲಾಗುವುದು. ಆ.12ರಂದು ಬೆಂಗಳೂರಿನ ಫ್ರೀಡಂ ಪಾ ರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದರು.
ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೆ.ವೀರಣ್ಣ, ಅಧ್ಯಕ್ಷ ಜಿ.ಬಿ.ಮಹಂತೇಶ್, ಪ್ರಧಾನ ಕಾರ‌್ಯದರ್ಶಿ ಜಿ.ಟಿ.ಹನುಮಂತಪ್ಪ, ಖಜಾಂಚಿ ಮಲ್ಲಿಕಾರ್ಜನ್, ತಾಲೂಕು ಸಂಘದ ಅಧ್ಯಕ್ಷ ಎಸ್.ಕೆಂಚಪ್ಪ, ರೂಪಾ, ರವಿಶಂಕರ್, ರಂಗೇಶ್, ಶಿವಪ್ರಕಾಶ್, ರಂಗಸ್ವಾಮಿ, ಪರ್ವಿನ್ ತಾಜ್, ಗೀತಾ, ರಾಜಪ್ಪ, ನವೀನ್, ಲತಾ, ದುರುಗೇಶಪ್ಪ, ಸುಧಾ ಇತರರು ಇದ್ದರು.