ಸರ್ಕಾರಿ ನೌಕರರ ಸಂಘದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುತ್ತಿರುವ ನೌಕರರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ರಾಯಚೂರಿನ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ಭೀಮಪ್ಪ ನಾಯಕ, ಕಾರ್ಯದರ್ಶಿ ಮಹಾಂತೇಶ ಬಿರಾದರ, ಪದಾಕಾರಿಗಳಾದ ಇಮಾನ್ಯುವೆಲ್, ಶ್ರೀನಿವಾಸ, ಈರೇಶ ನಾಯಕ, ಹನುಮಂತಪ್ಪ, ತಾಯಪ್ಪ, ವೀರೇಶ ಇದ್ದರು. 
ಜಿಲ್ಲೆ

ಅಪ ಪ್ರಚಾರ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ

ರಾಯಚೂರು: ಸರ್ಕಾರಿ ನೌಕರರ ಸಂಘದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಅಪ ಪ್ರಚಾರ ಮಾಡುತ್ತಿರುವ ಐವರು ಸರ್ಕಾರಿ ನೌಕರರ ಮೇಲೆ ಶಿಸ್ತು ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ.
ಸಂಘದ ನಿಯೋಗ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶಗೆ ಸೋಮವಾರ ಮನವಿ ಸಲ್ಲಿಸಿ, ಸಂಘದ ಪದಾಕಾರಿಗಳ ತೇಜೋವಧೆ ದುರುದ್ದೇಶದಿಂದ ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವವರ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿನ ಸುಮಾರು 5.25 ಲಕ್ಷ ಸರ್ಕಾರಿ ನೌಕರರನ್ನು ಪ್ರತಿನಿಸುವ ಸಂಘ ರಾಜ್ಯದ ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳಲಿ ಶಾಖೆಗಳನ್ನು ಹೊಂದಿದ್ದು, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಹಿಂದಿನ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಉತ್ತಮ ಕೆಲಸ ಮಾಡುತ್ತಾ ಬಂದಿದ್ದಾರೆ.
ಸಿ.ಎಸ್.ಷಡಾಕ್ಷರಿ ರಾಜ್ಯಾಧ್ಯಕ್ಷರಾದ ನಂತರ ಕಳೆದ ನಾಲ್ಕು ವರ್ಷಗಳಲ್ಲಿ ಅನೇಕ ನೌಕರ ಸ್ನೇಹಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಆದರೆ ಕೆಲವರು ಪದಾಕಾರಿಗಳ ವಿರುದ್ಧ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಮೂಲಕ ಸಂಘಟನೆಯ ಘನತೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸಚಿವಾಲಯದ ಅೀನ ಕಾರ್ಯದರ್ಶಿ ಶಾಂತಾರಾಮ, ಶಾಖಾಕಾರಿ ಗುರುಸ್ವಾಮಿ, ಭೂ ಮಾಪನ ಇಲಾಖೆ ಸೂಪರ್‌ವೈಸರ್ ವಿ.ವಿ.ಶಿವರುದ್ರಯ್ಯ, ಉಪನ್ಯಾಸಕ ನಿಂಗೇಗೌಡ್ರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ನಿಯೋಗದಲ್ಲಿ ಸಂಘದ ಜಿಲ್ಲಾಧ್ಯಕ್ಷ ಭೀಮಪ್ಪ ನಾಯಕ, ಕಾರ್ಯದರ್ಶಿ ಮಹಾಂತೇಶ ಬಿರಾದರ, ಪದಾಕಾರಿಗಳಾದ ಇಮಾನ್ಯುವೆಲ್, ಶ್ರೀನಿವಾಸ, ಈರೇಶ ನಾಯಕ, ಹನುಮಂತಪ್ಪ, ತಾಯಪ್ಪ, ವೀರೇಶ ಇದ್ದರು.