ಕಲಬುರಗಿ: ನಗರದ ಹೊರವಲಯದ ಸಿರನೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬಿಜೆಪಿ ಎಸ್ಸಿ ಮರ‍್ಚಾ ಜಿಲ್ಲಾ ಉಪಾಧ್ಯಕ್ಷ ಅಂಬಾರಾಯ ಚಲಗೇರಿ ಮೃತಪಟ್ಟಿದ್ದಾರೆ. ಗುರುವಾರ ಮಧ್ಯಾಹ್ನ ಬೈಕ್ ಮೇಲೆ ಪ್ರಯಾಣಿಸುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಂಬಾರಾಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಚಾರ ಠಾಣೆ &೧ರಲ್ಲಿ ಪ್ರಕರಣ ದಾಖಲಾಗಿದೆ.