ಜಿಲ್ಲೆ

ಅಪಘಾತದಲ್ಲಿ ಕಾರು ನಜ್ಜುಗುಜ್ಜು

ಆಲ್ದೂರು: ದಿಣ್ಣೇಕೆರೆ ಗ್ರಾಮದ ಬಳಿ ಬುಧವಾರ ಕಾರು ಮತ್ತು ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಮತ್ತು ಆಲ್ದೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದುಕೊಂಡಿದ್ದು, ಅಪಘಾತದ ರಭಸಕ್ಕೆ ಕಾರಿನ ಬಲಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದಲ್ಲದೆ ಕಾರಿನ ಚಕ್ರ ಕಿತ್ತುಹೋಗಿದೆ. ಕಾರಿನಲ್ಲಿ 4 ಜನರಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್ ಲಾರಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಆಲ್ದೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.