ಹಲಗೂರು: ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಹಿಂಬದಿ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬಾಳೆ ಹೊನ್ನಿಗ ಗ್ರಾಮದ ವೆಂಕಟಯ್ಯ(50) ಮೃತರು. ರಾಷ್ಟ್ರೀಯ ಹೆದ್ದಾರಿ-209ರಲ್ಲಿನ ಬಾಳೆ ಹೊನ್ನಿಗ ಗೇಟ್ ಬಳಿ ಬೈಕ್ ಮತ್ತು ಕಾರು ನಡುವೆ ಆ.31 ರಂದು ಅಪಘಾತ ನಡೆದಿತ್ತು. ಈ ವೇಳೆ ಬೈಕ್‌ನ ಹಿಂಬದಿ ಸವಾರ ವೆಂಕಟಯ್ಯ ಗಾಯಗೊಂಡಿದ್ದರು. ಚಿಕಿತ್ಸೆಗೆಂದು ಹಾರೋಹಳ್ಳಿ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.