ಹಾಸನ: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಬುಧವಾರ ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆ ದಬ್ಬೆಘಟ್ಟ ಹೋಬಳಿಯ ಬೇವಿನಹಳ್ಳಿ ಗ್ರಾಮದ ಅಭಿಜಿತ್ (28) ಮೃತ ಯುವಕ.
ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅಭಿಜಿತ್ ಕಳೆದ ತಿಂಗಳು ಸಂಬಂಧಿಕರ ಮದುವೆ ಕಾರ್ಯಕ್ಕೆಂದು ಊರಿಗೆ ಬಂದಿದ್ದರು. ಏ.4ರಂದು ಅಕ್ಕನ ಮಗುವಿಗೆ ಸಿರಾಪ್ ತರಲು ಊರಿನಿಂದ ಮಧ್ಯಾಹ್ನ 2.30ರ ಸಮಯದಲ್ಲಿ ಬೈಕಿನಲ್ಲಿ ಹಿರೀಸಾವೆಗೆ ತೆರಳಿದ್ದರು. ಸಿರಾಪ್ ತೆಗೆದುಕೊಂಡು ಸಂಜೆ 7 ಗಂಟೆ ಸಮಯದಲ್ಲಿ ಹಿರೀಸಾವೆಯಿಂದ ಊರಿಗೆ ವಾಪಸ್ಸಾಗುವ ಸಮಯದಲ್ಲಿ ಅತಿ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಬಂದು ರಸ್ತೆ ಎಡಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ತಲೆ ಮತ್ತು ಮೈಕೈಗೆ ಪೆಟ್ಟಾಗಿ ಕೆಳಗೆ ಬಿದ್ದ ಸವಾರನನ್ನು ಸ್ಥಳೀಯರು ಹಿರೀಸಾವೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಭಿಜಿತ್ ಬುಧವಾರ ಮೃತಪಟ್ಟಿದ್ದಾರೆ. ಅಪಘಾತ ಪ್ರಕರಣ ಸಂಬಂಧ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕಾನೂನುಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ತನಿಖೆಕೈಗೊಂಡಿರುತ್ತೆ.