ಜಿಲ್ಲೆ

ಅಪಘಾತದಲ್ಲಿ ಚಾಲಕ ಸಾವು

ತುಮಕೂರು: ಬೊಲೆರೊ ವಾಹನಕ್ಕೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿಯಾಗಿದ್ದು, ಬೊಲೆರೋ ವಾಹನದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವುದು ರಾಷ್ಟ್ರೀಯ ಹೆದ್ದಾರಿ 48 ರ ಚಿಕ್ಕಹಳ್ಳಿ ಬಳಿ ಮಂಗಳವಾರ ನಡೆದಿದೆ. ಚಾಲಕ ಶಿರಾ ತಾಲೂಕಿನ ಕೊಟ್ಟ ಗ್ರಾಮದ ನವೀನ್​(30) ಮೃತ ದುರ್ದೈವಿ, ಬೆಂಗಳೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿದ್ದ ಬೊಲೆರೋ ವಾಹನಕ್ಕೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಲಾರಿ. ಲಾರಿ ಡಿಕ್ಕಿಯಾದ ರಭಸಕ್ಕೆ ಬೊಲೆರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು. ಕ್ಯಾತಸಂದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು.