ಜಿಲ್ಲೆ

ಅಪಘಾತದಲ್ಲಿ ಜಿಪಂ ಇಂಜಿನಿಯರ್​ಗೆ ಗಾಯ

ಹುಲಿಯೂರುದುರ್ಗ: ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33 ಗೊಲ್ಲರಹಟ್ಟಿ ಗೇಟ್​ ಬಳಿ ಜಿಪಂ ಜಿಪಂ ಸಹಾಯಕ ಕಾರ್ಯಪಾಲಕ ಅಭಿಯಂತರ ಆನಂದ್​ ಅಪಘಾತವಾಗಿದೆ. ಆನಂದ್​ ಕಾರಿನಲ್ಲಿ ಹುಲಿಯೂರುದುರ್ಗದ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಗಾಯಗೊಂಡಿದ್ದ ಕಾರು ಚಾಲಕ ಹಾಗೂ ಆನಂದ್​ ಅವರನ್ನು ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಹುಲಿಯೂರುದುರ್ಗ ಪೊಲೀಸ್​ ಠಾಣೆೆಯಲ್ಲಿ ಪ್ರಕರಣ ದಾಖಲಾಗಿದೆ.