ಜಿಲ್ಲೆ

ಅಪಘಾತದಲ್ಲಿ ಬಸ್ ಪಲ್ಟಿ : ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು



ಮಡಿಕೇರಿ : ಮಡಿಕೇರಿ ಸಮೀಪದ ಬೋಯಿಕೇರಿಯಲ್ಲಿ ಭಾನುವಾರ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಬಸ್ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್ ಕೂಡ ನಜ್ಜುಗುಜಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿ ಕಡೆ ಬರುತ್ತಿದ್ದ ಬೈಕ್ ನಡುವೆ ಮಡಿಕೇರಿ ಸಮೀಪದ ಬೋಯಿಕೇರಿ ತಿರುವಿನಲ್ಲಿ ಅಪಘಾತವಾಗಿದೆ. ಅಪಘಾತದಲ್ಲಿ ರಸ್ತೆ ಪಕ್ಕಕ್ಕೆ ಬಸ್ ಪಲ್ಟಿ ಹೊಡೆದಿದ್ದು, ಬೈಕ್ ಕೂಡ ನಜ್ಜುಗುಜ್ಜಾಗಿದೆ. ಸಣ್ಣ ಪುಟ್ಟಗಾಯಗಳಿಂದ ಬೈಕ್ ಸವಾರ ಪರಾಗಿದ್ದಾನೆ. ಬಸ್‌ನಲ್ಲಿದ್ದ 21 ಪ್ರಯಾಣಿಕರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.


ಅಪಘಾತ ಹಿನ್ನೆಲೆ ಟ್ರಾಫಿಕ್ ಜಾಂ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.