ಮುಳಬಾಗಿಲು: ತಾಲೂಕಿನ ಜೆ.ವಮ್ಮಸಂದ್ರ ಗ್ರಾಮದ ಬಳಿ ಗುರುವಾರ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಆಂಧ್ರದ ಅನ್ನಮಯ್ಯ ಜಿಲ್ಲೆಯ ರಾಮಸಮುದ್ರಂ ಮಂಡಲಂನ ಕೋಸುವಾರುಪಲ್ಲಿ ಗ್ರಾಮದ ನಿವಾಸಿ ಗಂಗಿರೆಡ್ಡಿ (33) ಮೃತ. ಈತ ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ. ಗುರುವಾರ ಮಧ್ಯಾಹ್ನ ಕೋಸುವಾರುಪಲ್ಲಿಯಿಂದ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಂಗಿರೆಡ್ಡಿ ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.