ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಅನಂತಪುರ ಗ್ರಾಮದ ಬಳಿ ಜತ್ತ&ಜಾಂಬೋಟಿ ರಾಜ್ಯ ಹೆದ್ದಾರಿ ಮೇಲೆ ಬೈಕ್ ಸವಾರ ಆಯತಪ್ಪಿ ಬಿದ್ದು ಮೃತಪಟ್ಟ ಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಅನಂತಪುರ ಗ್ರಾಮ ಬಿರಿಮಲ್ಲ ನಿರ್ವತ್ತಿ ದೇವಖಾತೆ (42) ಮೃತ ವ್ಯಕ್ತಿ. ಡಪಳಾಪುರ ಗ್ರಾಮದ ಕಡೆಯಿಂದ ಅನಂತಪುರ ಗ್ರಾಮಕ್ಕೆ ಬೈಕ್ ಮೇಲೆ ಬರುವಾಗ ದುರ್ಟನೆ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಬಿರಿಮಲ್ಲನನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.